Categories
ಬೆಂಗಳೂರು ರಾಜ್ಯ

ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಅರೆಸ್ಟ್ ವಾರಂಟ್ ನೀಡಿದ ಕೋರ್ಟ್

ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಅರೆಸ್ಟ್ ವಾರಂಟ್ ನೀಡಿದ ಕೋರ್ಟ್
– ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್‌
– ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ

NAMMUR EXPRESS NEWS
ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಅಸಲಿ ಸಂಕಷ್ಟ ಶುರುವಾಗಿದೆ. ವಿದೇಶದಲ್ಲಿರುವ ಪ್ರಜ್ವಲ್‌ ಸೆರೆಗೆ ಎಸ್‌ಐಟಿ ಸರ್ಜಿಕಲ್ ಸ್ಟೈಕ್ ಆರಂಭಿಸಿದ್ದು, ಇದೀಗ ಹೊಳೆನರಸೀಪುರ ಕೇಸ್‌ನಲ್ಲಿ ಪ್ರಜ್ವಲ್ ಬಂಧನಕ್ಕೆ ಅರೆಸ್ಟ್ ವಾರಂಟ್ ಪಡೆದಿದೆ. ಜತೆಗೆ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಕೂಡ ಕೋರ್ಟ್ ಅನುಮತಿ ನೀಡಿದೆ. ನಗರದ 42ನೇ ಎಸಿಎಂಎಂ ಕೋರ್ಟ್, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ದ ಹೊರಡಿಸಿದ್ದ ನೋಟಿಸ್‌ಗಳ ಬಗ್ಗೆ ಕೋರ್ಟ್ ಮಾಹಿತಿ ಕೇಳಿತ್ತು. ಈ ವೇಳೆ ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್‌ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್‌ಐಟಿ, ಬಂಧನಕ್ಕೆ ಚಾರ್ಜ್ ಶೀಟ್ ಅವಶ್ಯಕತೆ ಇಲ್ಲ ಎಂದು ಕೋರ್ಟ್‌ಗೆ ಮನವರಿಕೆ ಮಾಡಿತ್ತು. ಹೀಗಾಗಿ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್‌

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣಗೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎಸ್‌ಐಟಿ ಲುಕ್ ಔಟ್ ನೋಟಿಸ್‌ ಹಾಗೂ ಬ್ಲೂ ಕಾರ್ನರ್ ನೋಟಿಸ್‌ ನೀಡಿತ್ತು. ಇದೀಗ ಅರೆಸ್ಟ್ ವಾರಂಟ್ ಲಭಿಸಿರುವುದರಿಂದ ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಎಸ್‌ಐಟಿ ಸಿದ್ದತೆ ನಡೆಸುತ್ತಿದೆ. ರೆಡ್ ಕಾರ್ನರ್ ನೋಟಿಸ್ ಬಳಿಕ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಆಗಲಿದ್ದು, ಇದರಿಂದ ಬಂಧನಕ್ಕೆ ಸಹಕಾರಿಯಾಗಲಿದೆ. ರೆಡ್ ಕಾರ್ನರ್ ನೋಟಿಸ್ ಎನ್ನುವುದು ಹಸ್ತಾಂತರ, ಶರಣಾಗತಿ ಅಥವಾ ಅಂತಹುದ್ದೇ ಕಾನೂನು ಕ್ರಮಕ್ಕೆ ಬಾಕಿ ಇರುವ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸುವುದಕ್ಕೆ ವಿಶ್ವಾದ್ಯಂತ ಕಾನೂನು ಜಾರಿಗೊಳಿಸಲು ಮಾಡುವ ವಿನಂತಿಯಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.