ಸೌಜನ್ಯ ಕೊಲೆ ಕೇಸ್: ನೈಜ ಆರೋಪಿ ಪತ್ತೆಗೆ ಸಿಎಂ ಭೇಟಿ
– ಸಿದ್ದರಾಮಯ್ಯ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
NAMMUR EXPRESS NEWS
ಬೆಂಗಳೂರು: ಧರ್ಮ ಸ್ಥಳ ಸಮೀಪದ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ ಇದೀಗ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕುಮಾರಿ ಸೌಜನ್ಯ ಪ್ರಕರಣವನ್ನು ಮರು ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ. ಸೌಜನ್ಯ ಕೊಲೆ ಪ್ರಕರಣದಲ್ಲಿ ಆರೋಪಿಯನ್ನು ನ್ಯಾಯಾಲಯ ದೋಷ ಮುಕ್ತ ಗೊಳಿಸಿದೆ.
ಇದು ಬೆಳ್ತಂಗಡಿಯ ಸಜ್ಜನ ಜನತೆಗೆ ಬಹಳ ನೋವು ಉಂಟು ಮಾಡಿದ್ದು, ನೈಜ ಆರೋಪಿಗಳು ಇನ್ನೂ ಬಂಧನವಾಗಿಲ್ಲ ಎಂಬ ವಾದ ಬೆಳ್ತಂಗಡಿ ಜನತೆಯದ್ದಾಗಿದ್ದು ಈ ಬಗ್ಗೆ ಈ ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ನೀಡಬೇಕೆಂದು ಮುಖ್ಯಮಂತ್ರಿಗೆ ಮಾನ್ಯ ಶಾಸಕ ಹರೀಶ್ ಪೂಂಜಾ ಮನವಿ ಮಾಡಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ಜೊತೆಗಿದ್ದರು.
ಇದನ್ನೂ ಓದಿ : ಕರಾವಳಿಯಲ್ಲಿ ಕೊರಗಜ್ಜನ ಪವಾಡ.!
HOW TO APPLY : NEET-UG COUNSELLING 2023