ಗ್ಯಾರಂಟಿ ಯೋಜನೆ ಅರ್ಜಿ ಹಾಕಲು ಸೈಬರ್ ಗೋಲ್ ಮಾಲ್!?
– ಗೃಹಲಕ್ಷ್ಮೀ ಯೋಜನೆ ತಾತ್ಕಾಲಿಕ ಸ್ಥಗಿತ
– ಅರ್ಜಿದಾರರಿಂದ ಕೆಲವು ಸೈಬರ್ ಗಳ ಹಣ ವಸೂಲಿ
NAMMUR EXPRESS NEWS
ಬೆಂಗಳೂರು: ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆ ಅರ್ಜಿ ಹಾಕಲು ಸೈಬರ್ ಗೋಲ್ ಮಾಲ್ ಶುರುವಾಗಿದೆ.
ಕಂಪ್ಯೂಟರ್ ಸೆಂಟರಲ್ಲಿ ಜನರನ್ನು ಸುಲಿಗೆ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆ ಸರ್ಕಾರ ಇದೀಗ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಮನೆಯೊಡತಿಯರಿಗೆ 2000 ರೂ.ಮಾಸಿಕ ನೀಡುವ ಗೃಹಲಕ್ಷ್ಮೀ ಯೋಜನೆ ತಾತ್ಕಾಲಿಕ ಸ್ಥಗಿತ ಮಾಡಲಾಗಿದೆ.
ಅರ್ಜಿದಾರರು ಎದುರಿಸುತ್ತಿರುವ ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸಲು ಗೃಹಲಕ್ಷ್ಮಿ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ.
ಗೃಹ ಲಕ್ಷ್ಮಿಯೋಜನೆಯು ಕಾಂಗ್ರೆಸ್ ಪಕ್ಷದ ಚುನಾವಣಾ ಖಾತರಿಗಳಲ್ಲಿ ಒಂದಾಗಿದ್ದು, ಇದು ರಾಜ್ಯಾದ್ಯಂತ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ. ನೀಡುವ ವಾಗ್ದಾನ ಹೊಂದಿದೆ.
ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಭ್ರಷ್ಟಾಚಾರ ಮುಕ್ತ ವಾತಾವರಣವನ್ನು ಖಾತ್ರಿಪಡಿಸಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪುನರ್ ರಚಿಸಲಾಗುವುದು ಎಂದಿದ್ದಾರೆ.
ಏಜೆನ್ಸಿಗಳು ಅರ್ಜಿ ತುಂಬಲು ಅರ್ಜಿದಾರರಿಂದ ಹಣ ವಸೂಲಿ ಮಾಡುತ್ತಿವೆ ಎನ್ನುವ ದೂರುಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ತಾತ್ಕಾಲಿಕ ತಡೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023