ಚಂಡಮಾರುತ ಎಫೆಕ್ಟ್: ಮುಂದಿನ 3 ಗಂಟೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ!
– ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆಯಿಂದ ಸೂಚನೆ
– ಯಾವೆಲ್ಲಾ ಜಿಲ್ಲೆಗಳಿಗೆ ಭರ್ಜರಿ ಮಳೆ ಸಾಧ್ಯತೆ?
NAMMUR EXPRESS NEWS
ಬೆಂಗಳೂರು: ಬಿಸಿಲಿನಿಂದ ಹೈರಾಣಾಗಿದ್ದ ಜನರಿಗೆ ಕೊನೆಗೂ ವರುಣ ದೇವ ತಂಪೆರೆದಿದ್ದಾನೆ. ಬಿರು ಬಿಸಿಲು ಕಂಗೆಟ್ಟ ಜನರಿಗೆ ಮಳೆಯಾಗಿ ಸಂತಸ ಮೂಡಿಸಿದ್ದು, ಕೃಷಿ ಚಟುವಟಿಕೆ ಆರಂಭಿಸಿರುವ ರೈತರು ಖುಷಿಯಲ್ಲಿದ್ದಾರೆ. ಇತ್ತ ಕಳೆದು ಮೂರ್ನಾಲ್ಕು ದಿನದಿಂದ ಸುರಿದ ಭಾರೀ ಮಳೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ.
ನೂರಾರು ಮರಗಳು ಮಳೆ ಗಾಳಿಗೆ ಧರೆಗಪ್ಪಳಿಸಿದೆ.
ಕೆಲವು ಸಾವು ನೋವುಗಳು ವರದಿಯಾಗಿದೆ.
ಇನ್ನೂ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಬೀದರ್, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗುಲ್ಬರ್ಗ, ಯಾದಗಿರಿ ಸೇರಿ ಈ ಭಾಗದ ಜಿಲ್ಲೆಗಳಿಗೆ ಭರ್ಜರಿ ಮಳೆಯಾಗಲಿದೆ, ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ. ಬಂಗಾಳಕೊಲ್ಲಿಯಲ್ಲಿ ಶಕ್ತಿ ಚಂಡಮಾರುತ ರೂಪುಗೊಂಡಿದ್ದು ಮುಂಗಾರು ಆಗಮನಕ್ಕೂ ಮುನ್ನವೇ ಕರ್ನಾಟಕದಲ್ಲಿ ಮಳೆ ಚುರುಕು ಪಡೆದಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಘೋಷಿಸಲಾಗಿದೆ.