ಸೈಕ್ಲೋನ್ ಎಫೆಕ್ಟ್, ಏ. 17ರವರೆಗೆ ರಾಜ್ಯದಲ್ಲಿ ಭಾರೀ ಮಳೆ
– 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆ
– ಯಾವ ಯಾವ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ?
NAMMUR EXPRESS NEWS
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಏಪ್ರಿಲ್ 17ರವರೆಗೆ ಬೆಂಗಳೂರು ಸೇರಿದಂತೆ ಒಟ್ಟು 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೀಗ ದಕ್ಷಿಣ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೆಲ ದಿನಗಳಿಂದ ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ 25 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಂದು ಹವಾಮಾನ ಇಲಾಖೆ ತಿಳಿಸಿದೆ.