Categories
ತೀರ್ಥಹಳ್ಳಿ ಬೆಂಗಳೂರು

ತೀರ್ಥಹಳ್ಳಿಗೆ ಮಹಿಳಾ ಅಧಿಕಾರಿ ಮೃತದೇಹ!?

ತೀರ್ಥಹಳ್ಳಿಗೆ ಮಹಿಳಾ ಅಧಿಕಾರಿ ಮೃತದೇಹ!?
– ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
– ಪೋಲೀಸರ ತನಿಖೆ ಶುರು… ಏನಿದೆ ರಿಪೋರ್ಟ್?
– ಹಂತಕರ ಪತ್ತೆಗೆ ತೀರ್ಥಹಳ್ಳಿ ಮುಖಂಡರ ಪಟ್ಟು

NAMMUR EXPRESS NEWS
ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ವೊಬ್ಬರನ್ನು ಶನಿವಾರ ರಾತ್ರಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(45) ಭೀಕರವಾಗಿ ಹತ್ಯೆಗೀಡಾದವರಾಗಿದ್ದು ಅವರ ಮೃತದೇಹ ತೀರ್ಥಹಳ್ಳಿಗೆ ತರಲಾಗುತ್ತಿದೆ. ಮಹಿಳಾ ಅಧಿಕಾರಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ರಾತ್ರಿ ಪ್ರತಿಮಾ ಅವರಿಗೆ ಅವರ ಸಹೋದರ ಕರೆ ಮಾಡಿದ್ದರು. ಆದ್ರೆ ಅವರು ಕರೆ ಸ್ವೀಕರಿಸಿರಲಿಲ್ಲ. ಬೆಳಿಗ್ಗೆ ಮನೆಗೆ ಬಂದಾಗಿ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ ಎಂದು ತಿಳಿದು ಬಂದಿದೆ. ಪ್ರತಿಮಾ ಅವರ ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು. ಕೆಲಸದ ನಿಮಿತ್ತ ಪ್ರತಿಮಾ ಅವರು ಬೆಂಗಳೂರಿನಲ್ಲಿ ವಾಸವಿದ್ದರು. ಇವರಿಗೆ 15 ವರ್ಷದ ಮಗ ಕೂಡ ಇದ್ದಾನೆ. ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಕತ್ತು ಕೊಯ್ದು ಕೊಲೆ ಮಾಡಲಾಗಿದೆ.

ಕಾರು ಚಾಲಕ ನಾಪತ್ತೆ:

ಪ್ರತಿಮಾ ಅವರನ್ನು ಶನಿವಾರ ಕಚೇರಿಯಿಂದ ಮನೆಗೆ ಕರೆದುಕೊಂಡು ಬಂದಿದ್ದ ಕಾರು ಚಾಲಕ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಹೀಗಾಗಿ ಘಟನೆ ಬಗ್ಗೆ ಹಲವಾರು ಅನುಮಾನಗಳು ಮೂಡಿವೆ. ಸದ್ಯ ಕೊಲೆ ಮಾಡಿದವರು ಯಾರು ಹಾಗೂ ಕೊಲೆಗೆ ಕಾರಣಗಳೇನು ಎನ್ನುವ ಪ್ರಶ್ನೆಗಳಿಗೆ ಈವರೆಗೆ ಉತ್ತರ ಸಿಕ್ಕಿಲ್ಲ.

ಪ್ರತಿಮಾ ಕೊಲೆ ಪ್ರಕರಣದ ತನಿಖೆ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಕೊಲೆ ಪ್ರಕರಣದ ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಈಗಷ್ಟೇ ಮಾಹಿತಿ ತಿಳಿಯಿತು. ಅವರು ಬೆಂಗಳೂರಿನಲ್ಲಿ ಕಳೆದ ಕೆಲವು ವರ್ಷಗಳಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದು ಅವರ ಪತಿ ಪರವೂರಿನಲ್ಲಿದ್ದರಂತೆ. ಅವರ ಕೊಲೆ ಹೇಗಾಯ್ತು, ಯಾಕಾಯ್ತು ಎಂದು ತನಿಖೆ ಮಾಡಿಸಲಾಗುವುದು ಎಂದರು.

ತೀರ್ಥಹಳ್ಳಿಗೆ ಮೃತ ದೇಹ?

ಪ್ರತಿಮಾ ಅವರ ಮೃತ ದೇಹ ತೀರ್ಥಹಳ್ಳಿ ಪಟ್ಟಣದ ಸಮೀಪದ ತುಡ್ಕಿ ಬಳಿ ಇರುವ ಅವರ ಮನೆಗೆ ತರಲಾಗುತ್ತಿದೆ. ಸೋಮವಾರ ಬೆಳಿಗ್ಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಹಂತಕರಿಗೆ ಶಿಕ್ಷೆಯಾಗಲಿ: ಕುಕ್ಕೆ ಪ್ರಶಾಂತ್

ತೀರ್ಥಹಳ್ಳಿ : ತೀರ್ಥಹಳ್ಳಿ ಮೂಲದ ಗಣಿ ಅಧಿಕಾರಿ ಬೆಂಗಳೂರಿನಲ್ಲಿ ಕೊಲೆಯಾಗಿದ್ದು ಹಂತಕರನ್ನ ಶೀಘ್ರವಾಗಿ ಬಂಧಿಸಬೇಕೆಂದು ಬಿಜೆಪಿ ಯುವ ನಾಯಕ ಕುಕ್ಕೆ ಪ್ರಶಾಂತ್ ಅಗ್ರಹಿಸಿದ್ದಾರೆ. ತೀರ್ಥಹಳ್ಳಿ ಮೂಲದ ಗೃಹಿಣಿಯನ್ನ ಬರ್ಬರವಾಗಿ ಕೊಲೆ ಮಾಡಿದ್ದು ಈ ಹಿಂದೆ ಗಣಿ ಲಾಬಿ ಇದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಗುಂಡಾಗಿರಿ ಹತ್ಯೆಗಳು ಹೆಚ್ಚಾಗಿದೆ. ಇನ್ನು ಅಧಿಕಾರಿಗಳ ಮೇಲೆ ಪದೇಪದೇ ಹಲ್ಲೆ ನಡೆಯುತ್ತಿದ್ದು ಕೊಲೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಹಂತಕರನ್ನು ಬಂಧಿಸಬೇಕು ಇದರ ಹಿಂದೆ ಇರುವ ಷಡ್ಯಂತರವನ್ನ ಭೇದಿಸಬೇಕು ಎಂದು ಅಗ್ರಹಿಸಿದ್ದಾರೆ. ತೀರ್ಥಹಳ್ಳಿ ಮೂಲದ ಪ್ರತಿಮಾ ಅವರು ಬೆಂಗಳೂರಿನಲ್ಲಿ ಗಣಿ ಇಲಾಖೆಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಗಣಿ ಅವ್ಯವಹಾರ ಮತ್ತು ಅಕ್ರಮದ ಸಂಬಂಧಪಟ್ಟ ಹಾಗೆ ಖಡಕ್ ಆಗಿ ಕೆಲಸ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂಬ ಬಗ್ಗೆ ತನಿಖೆ ಬೆನ್ನಲ್ಲೇ ಕುಕ್ಕೆ ಪ್ರಶಾಂತ್ ಅವರು ತಕ್ಷಣ ಹಂತಕರನ್ನು ಬಂಧಿಸಲು ಅಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.