ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ಕಾರ್ಯಕರ್ತೆ ವಶಕ್ಕೆ!
– ಮೈಸೂರಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಇಬ್ಬರ ಸಾವು
– ವಿದ್ಯುತ್ ಇಂದ ತಪ್ಪಿಸಲು ಹೋದವನು ಸಾವು
NAMMUR EXPRESS NEWS
ಬೆಂಗಳೂರು: ಉಡುಪಿ ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಸಂಬಂಧ ಟ್ವಿಟ್ ಮಾಡುವಾಗ, ಸಿಎಂ ಸಿದ್ದರಾಮಯ್ಯ ಕುಟುಂಬಸ್ಥರ ವಿರುದ್ಧ ಅವಹೇಳನಕಾರಿ ಪದ ಬಳಿಸಿದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರು ಮೂಲದ ಶಕುಂತಲಾ ನಟರಾಜ್ ಎಂಬಾಕೆಯನ್ನು ಬೆಂಗಳೂರಿನ ಹೈಗೌಂಡ್ಸ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ಅವರ ವಿಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಪೋತೀರಾ? ಎಂದು ಟ್ವಿಟ್ ಮಾಡಿದ್ದರು.
ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಶಾಕ್ ಹೊಡೆದು ಇಬ್ಬರು ಸಾವು
ಕಾಂಪೌಂಡ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರನ್ನು ಹೊರತರಲು ಯತ್ನಿಸಿದ ಇಬ್ಬರು ಯುವಕರು ವಿದ್ಯುತ್ ಸಂಪರ್ಕ ಸಾಧಿಸಿ ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿ ನಡೆದಿದೆ. ಯುವಕರ ಸಹಾಯಕ್ಕೆ ಬಂದ ಮೂವರು ಗಾಯಗೊಂಡಿದ್ದಾರೆ. ಅಶೋಕಾಪುರಂ ನಿವಾಸಿಗಳಾದ ಕಿರಣ್ ಹಾಗೂ ರವಿಕುಮಾರ್ ಮೃತ ದುರ್ದೈವಿಗಳು. ಇವರ ನೆರವಿಗೆ ಬಂದ ರವಿ, ಸಂದೇಶ್, ಶಿವಕುಮಾರ್ ವಿದ್ಯುತ್ ಶಾಕ್ ನಿಂದ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುರುವಾರ ತಡರಾತ್ರಿ ಘಟನೆ ನಡೆದಿದೆ. ಸಂಸದ ಶ್ರೀನಿವಾಸ್ ಪ್ರಸಾದ್ ರವರ ಸಂಬಂಧಿಕರಿಗೆ ಸೇರಿದ ಇನೋವಾ ಕಾರನ್ನು ಟ್ರಯಲ್ ನೋಡುವುದಾಗಿ ರವಿಕುಮಾರ್ ಪಡೆದಿದ್ದಾರೆ. ಮಾನಂದವಾಡಿ ರಸ್ತೆಯಲ್ಲಿ ರವಿಕುಮಾರ್, ಭಾಸ್ಕರ್, ರವಿ, ಸಂದೇಶ್ ಹಾಗೂ ಶಿವಕುಮಾರ್ ಆಶೋಕಾಪುರಂ ನತ್ತ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಕಾಂಪೌಂಡ್ ಗೆ ಢಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಕಾರಿನಿಂದ ನಾಲ್ವರೂ ಹೊರಬಂದ ನಂತರ ವಿದ್ಯುತ್ ತಂತಿ ಸಂಪರ್ಕ ಪಡೆದಿದೆ. ಕಾಂಪೌಂಡ್ ಹಾಗೂ ಕಂಬದ ನಡುವೆ ಸಿಲುಕಿದ ಕಾರನ್ನ ಹೊರತರಲು ಯತ್ನಿಸಿದ್ದಾರೆ.
ಈ ವೇಳೆ ಆಟೋದಲ್ಲಿ ಬರುತ್ತಿದ್ದ ಡ್ರೈವರ್ ಕಿರಣ್ ಕುಮಾರ್ ನೆರವಿಗೆ ಬಂದಿದ್ದಾರೆ. ಕಾರನ್ನು ಹೊರತರುವ ಯತ್ನದಲ್ಲಿದ್ದ ಇವರಿಗೆ ವಿದ್ಯುತ್ ಸಂಪರ್ಕ ಸಾಧಿಸಿದೆ. ಹೈವೋಲ್ವೇಜ್ ತಂತಿ ಸಂಪರ್ಕ ಸಾಧಿಸಿದ ಪರಿಣಾಮ ರವಿಕುಮಾರ್ ಕುಸಿದು ಬಿದ್ದಿದ್ದಾರೆ. ನೆರವಿಗೆ ಬಂದ ಆಟೋಡ್ರೈವರ್ ಕಿರಣ್ ರವರೂ ಸಹ ಮೃತಪಟ್ಟಿದ್ದಾರೆ. ಇವರಿಬ್ಬರ ನೆರವಿಗೆ ಬಂದ ರವಿ, ಸಂದೇಶ್, ಶಿವಕುಮಾರ್ ಗೂ ಶಾಕ್ ಹೊಡೆದಿದೆ. ಐವರನ್ನೂ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದೆ. ರವಿಕುಮಾರ್ ಹಾಗೂ ಕಿರಣ್ ಮೃತಪಟ್ಟಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಭಾಸ್ಕರ್ ಅವಘಢದಿಂದ ತಪ್ಪಿಸಿಕೊಂಡಿದ್ದಾರೆ. ಕೆ.ಆರ್.ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ತೀರ್ಥಹಳ್ಳಿ ಪ್ರತೀಕ್ ಗೌಡ ಕೇಸ್!
HOW TO APPLY : NEET-UG COUNSELLING 2023