Categories
ಬೆಂಗಳೂರು

ರಾಜ್ಯ ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಡಾ. ಸುಧಾ ಮೂರ್ತಿ

ರಾಜ್ಯ ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಡಾ. ಸುಧಾ ಮೂರ್ತಿ
– ವಿದ್ಯಾರ್ಥಿಗಳಿಗೆ ಸ್ಫೂರ್ತಿ ಮಾತನಾಡಿದ ಇನ್ಫೋಸಿಸ್ ಸಂಸ್ಥಾಪಕಿ
– ಒಕ್ಕಲಿಗರ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಹಾಜರ್

NAMMUR EXPRESS NEWS
ಬೆಂಗಳೂರು: ರಾಜ್ಯ ಒಕ್ಕಲಿಗ ಸಂಘ (ರಿ.) ಬೆಂಗಳೂರು ಇವರ ವತಿಯಿಂದ ವಿದ್ಯಾರ್ಥಿ ಚೈತನ್ಯ ಕಾರ್ಯಕ್ರಮ-2025 ಅತ್ಯಂತ ಸುಂದರವಾಗಿ ನಡೆದಿದ್ದು, ಮುಖ್ಯ ಅತಿಥಿಗಳಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷರಾದ ಡಾ. ಸುಧಾ ಮೂರ್ತಿ ಆಗಮಿಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ಮಾತನಾಡಿದರು.
ಕುವೆಂಪು ಕಲಾಕ್ಷೇತ್ರ, ಬಿಐಟಿ ಕ್ಯಾಂಪಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಕ್ಕಲಿಗ ಸಂಘದ ಅಧ್ಯಕ್ಷರಾದ ಕೆಂಚಪ್ಪ ಗೌಡ, ಬಿ. ಐ. ಟಿ ಅಧ್ಯಕ್ಷರಾದ ಅಶೋಕ್ ಜಯರಾಮ್, ನಿರ್ದೇಶಕರಾದ ಸಿರಿಬೈಲ್ ಧರ್ಮೇಶ್, ಕಾರ್ಯದರ್ಶಿ ಕೋನಪ್ಪ ರೆಡ್ಡಿ, ನಿರ್ದೇಶಕರಾದ ಡಾ.ಅಂಜನಪ್ಪ ಆಡಳಿತ ಮಂಡಳಿ ನಿರ್ದೇಶಕರು,,ಡಾ.ಜೆ.ಪ್ರಕಾಶ್ ಪ್ರಾಂಶುಪಾಲರು, ಬಿಐಟಿ, ಅಧ್ಯಾಪಕ ಸದಸ್ಯರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಡಾ. ಸುಧಾ ಮೂರ್ತಿ ಮಾತು ಕೇಳಿ ಖುಷಿಯಾದ ವಿದ್ಯಾರ್ಥಿಗಳು

ನಾಡು ಕಂಡ ಅಪ್ರತಿಮ ಪ್ರತಿಭೆ ಡಾ. ಸುಧಾ ಮೂರ್ತಿ ಅವರ ಮಾತನ್ನು ಕೇಳಿ ವಿದ್ಯಾರ್ಥಿಗಳು ಖುಷಿ ಪಟ್ಟರು. ವಿಶೇಷ ಮತ್ತು ಸಂಸ್ಥೆಯ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ಕಾರ್ಯಕ್ರಮ ಆಯೋಜನೆ ಮೂಲಕ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಲ್ಲರ ಮೆಚ್ಚುಗೆ ಗಳಿಸಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.