ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸ್ತ್ರಸಂಹಿತೆ ನೀತಿ ಅಗತ್ಯ
– ಕೇಂದ್ರ ಸರ್ಕಾರಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ
– ಕಾನೂನು ಹಾಗೂ ವಸ್ತಸಂಹಿತೆ ನಿಯಮಗಳು ಭಾರತದಾದ್ಯಂತ ಅನ್ವಯ ಮಾರ್ಗಸೂಚಿ ಮಾರ್ಪಾಡಾಗಲಿ ಎಂದು ಹೇಳಿಕೆ
NAMMUR EXPRESS NEWS
ಬೆಂಗಳೂರು : ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದ ಅಭ್ಯರ್ಥಿಗೆ ಜನಿವಾರ ತೆಗೆಸಿದ ವಿವಾದಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು. ಪರೀಕ್ಷಾ ಮಾರ್ಗಸೂಚಿಯ ವಸ್ತಸಂಹಿತೆ ನೀತಿಯಲ್ಲಿ ಅವಶ್ಯಕ ಬದಲಾವಣೆ ಮಾಡುವಂತೆ ಮನವಿ ಮಾಡಿದ್ದಾರೆ.
ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಗೆ ಬರೆದಿರುವ ಪತ್ರದಲ್ಲಿ ಸಾರಿಗೆ ಸಿಇಟಿ ಪರೀಕ್ಷೆಯ ತಪಾಸಕರು, ವಿದ್ಯಾರ್ಥಿಯ ಜನಿವಾರ ತೆಗೆಸಿರುವ ಪ್ರಕರಣವು ತೀವ್ರ ಆಘಾತ ಉಂಟು ಮಾಡಿದೆ. ಈ ಪ್ರಕರಣದಲ್ಲಿ ಬಿಜೆಪಿಯವರು ವಿನಾಕಾರಣ ರಾಜಕಾರಣ ಮಾಡುತ್ತಾ ಸಿದ್ದರಾಮಯ್ಯ ಸರ್ಕಾರದ ಕುರಿತು ಹಿಂದೂ ವಿರೋಧಿ ಎಂದು ಅಪಪ್ರಚಾರ ಮಾಡುತ್ತಿರುವುದು ಮತ್ತಷ್ಟು ಕಳವಳಕಾರಿ ಸಂಗತಿ. ಜನಿವಾರ ತೆಗೆಸುವುದು, ಮಾಂಗಲ್ಯ ತೆಗೆಸುವುದು (ಕಳೆದ ಬಾರಿಯ ಕೆಎಎಸ್ ಪರೀಕ್ಷೆಯಲ್ಲಿ ನಡೆದ ಘಟನೆ) ಹಿಜಾಬ್ ತೆಗೆಸುವುದು ಒಬ್ಬ ವ್ಯಕ್ತಿಯ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಕೆಲಸ, ಹಾಗಾಗಿ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ಮಾರ್ಗಸೂಚಿ ಮಾರ್ಪಾಡಾಗಲಿ: ಕೇಂದ್ರ ಸರ್ಕಾರದ ಪರೀಕ್ಷಾ ಪ್ರಾಧಿಕಾರಗಳೇ ಮಾಡಿರುವ ಕಾನೂನು ಹಾಗೂ ವಸ್ತಸಂಹಿತೆ ನಿಯಮಗಳು ಭಾರತದಾದ್ಯಂತ ಅನ್ವಯವಾಗುತ್ತವೆ. ಈ ನಿಯಮಕ್ಕೂ ಸಿದ್ದರಾಮಯ್ಯ ಸರ್ಕಾರಕ್ಕೂ ಅಥವಾ ನಿಯಮ ಪಾಲನೆ ಮಾಡಿದ ಪರೀಕ್ಷಾ ಕೇಂದ್ರದ ತಪಾಸಕರಿಗೂ ಎಲ್ಲಿ ಸಂಬಂಧ ಎಂದು ಪ್ರಶ್ನಿಸಿದರುವ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಿಷ್ಪಕ್ಷಪಾತತೆ ಮತ್ತು ಶುದ್ಧತೆಯನ್ನು ಕಾಪಾಡುವ ಉದ್ದೇಶ ಒಳ್ಳೆಯದೆ. ಆದರೆ ಕೇಂದ್ರ ಸರ್ಕಾರದ ಪರೀಕ್ಷಾ ಮಾರ್ಗಸೂಚಿಗಳಲ್ಲಿ ಕೆಲವೊಂದನ್ನು ಮಾರ್ಪಾಡು ಮಾಡಿ ಧಾರ್ಮಿಕ ಸ್ವಾತಂತ್ರ್ಯ ಕಾಪಾಡಲು, ರಕ್ಷಿಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.