ಬಕ್ರೀದ್ ಹಬ್ಬಕ್ಕೆ ಸಜ್ಜು: ನಾಟಿ ಕುರಿಗಳಿಗೆ ಡಿಮ್ಯಾಂಡ್!
– ಬೆಂಗಳೂರು ಸೇರಿ ಎಲ್ಲೆಡೆ ಕುರಿಗಳಿಗೆ ಹೆಚ್ಚಿದ ಬೇಡಿಕೆ
– ಎಲ್ಲಾ ಕಡೆ ಬಕ್ರೀದ್ ಹಬ್ಬದ ಸಂಭ್ರಮಕ್ಕೆ ಸಿದ್ಧತೆ
– 1.20 ಲಕ್ಷದವರೆಗೆ ಒಂದು ಕುರಿ ಮಾರಾಟ!
NAMMUR EXPRESS NEWS
ಬೆಂಗಳೂರು: ಬಕ್ರೀದ್ ಹಬ್ಬ ಸಮೀಪಿಸುತ್ತಿದ್ದಂತೆಯೇ ಎಲ್ಲೆಡೆ ಹಬ್ಬದ ಸಂಭ್ರಮಕ್ಕೆ ಸಿದ್ಧತೆ ಶುರುವಾಗಿದೆ. ಬೆಂಗಳೂರಿನ ಚಾಮರಾಜಪೇಟೆ ಸೇರಿದಂತೆ ರಾಜ್ಯದ ಎಲ್ಲಾ ಕಡೆ ಟಗರು, ಕುರಿ ಹಾಗೂ ಮೇಕೆಗಳ ಮಾರಾಟ ಬಿರುಸುಗೊಂಡಿದೆ. ಈ ಬಾರಿ ನಾಟಿ ಮತ್ತು ಬಾಗಲಕೋಟೆ ಜಿಲ್ಲೆಯ ಅಮೀನಗಡ ತಳಿಯ ಕುರಿಗಳಿಗೆ ಬೇಡಿಕೆ ಹೆಚ್ಚಿದೆ. ಹಬ್ಬಕ್ಕೆ ಇನ್ನೂ 2 ದಿನ ಬಾಕಿ ಇರುವಂತೆ ವ್ಯಾಪಾರ ಜೋರಾಗಿದೆ.
ಬೆಂಗಳೂರಲ್ಲಿ ನಾನಾ ಜಿಲ್ಲೆಗಳಿಂದ ವಿವಿಧ ತಳಿಗಳ ಕುರಿ ಹಾಗೂ ಮೇಕೆಗಳ ದಂಡುಗಳೊಂದಿಗೆ ವ್ಯಾಪಾರಿಗಳು ಬೀಡುಬಿಟ್ಟಿದ್ದಾರೆ. ಜೂ. 29ಕ್ಕೆ ಹಬ್ಬವಿದ್ದು, ಗ್ರಾಹಕರು ಈಗಲೇ ಕುರಿ ಖರೀದಿಗೆ ಮುಗಿ ಬೀಳುತ್ತಿದ್ದಾರೆ.
ಬಂಡೂರು, ಕಿರಿಗಾವು, ಮೌಳಿ, ಶಿರೋಹಿ, ತಮಿಳುನಾಡು ಕುರಿ, ಬಾಗಲಕೋಟೆ, ಅಮೀನಗಡ, ಗೆಣಸಿ, ಶಿರಾ, ತುಮಕೂರು, ಚಿತ್ರದುರ್ಗ ಮರಿ ಸೇರಿದಂತೆ ವಿವಿಧ ತಳಿಗಳು ಇಲ್ಲಿವೆ.
ಬಂಡೂರು ಕುರಿಗಳು ಕನಿಷ್ಠ 3 15ಸಾವಿರದಿಂದ ಗರಿಷ್ಠ 90ಸಾವಿರದವರೆಗೆ ಮಾರಾಟವಾದರೆ, ಅಮೀನಗಡ ತಳಿಯ ಟಗರಿಗೆ ಕನಿಷ್ಠ 20 ಸಾವಿರದಿಂದ ಗರಿಷ್ಠ 1.20ಲಕ್ಷದವರೆಗೂ ಬಿಕರಿಯಾಗುತ್ತಿವೆ’ ಎಂದು ವ್ಯಾಪಾರಿ ಚಿಕ್ಕಣ್ಣ ತಿಳಿಸಿದರು. ಬಾಗಲಕೋಟೆ ಜಿಲ್ಲೆಯ ಅಮೀನಗಡದಿಂದ 60 ಟಗರು ತಂದಿದ್ದೇನೆ. 20 ಟಗರು ಮಾರಾಟವಾಗಿವೆ. ಈ ವರ್ಷ ವ್ಯಾಪಾರ ಕುಸಿದಿದೆ. ಕುರಿ, ಟಗರಿನ ಬೆಲೆಗೆ ಹೋಲಿಸಿದರೆ ಹಸು, ಎತ್ತುಗಳ ಬೆಲೆ ಕಡಿಮೆ. ಗ್ರಾಹಕರು ಅವುಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಹಬ್ಬಕ್ಕೆ ಇನ್ನೂ2 ದಿನಗಳಿವೆ. ಎಲ್ಲ ಟಗರು ಮಾರಾಟವಾಗುವ ನಿರೀಕ್ಷೆ ಇದೆ’ ಎಂದು ವ್ಯಾಪಾರಿ ಮಲೀಕ್ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!
HOW TO APPLY : NEET-UG COUNSELLING 2023