ಕೆಂಪೇಗೌಡ ಜಯಂತಿ ಆಚರಣೆಗೆ ಸಜ್ಜು!
– ಜೂ.27ರಂದು ತಾಲೂಕು, ಜಿಲ್ಲಾ ಕೇಂದ್ರದಲ್ಲಿ ಆಚರಣೆ
– ಸರ್ಕಾರದಿಂದ ರಾಜಧಾನಿಯಲ್ಲಿ ಕಾರ್ಯಕ್ರಮ
– 198 ಮಂದಿಗೆ ಸನ್ಮಾನ: ಸರ್ಕಾರದ ಆದೇಶ
NAMMUR EXPRESS NEWS
ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು
ರಾಜ್ಯಾದ್ಯಂತ ಜೂ.27ರಂದು ಆಚರಣೆ ಮಾಡಲು ಸಿದ್ಧತೆ ನಡೆದಿದೆ.
ರಾಜ್ಯಮಟ್ಟದ ಕಾರ್ಯಕ್ರಮವು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದ್ದು, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಇದಕ್ಕಾಗಿ ಮಾಜಿ ಸಚಿವ ಬಿ.ಎಲ್. ಶಂಕರ್ ನೇತೃತ್ವದಲ್ಲಿ ಆಯ್ಕೆ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ರಾಜಧಾನಿಯಲ್ಲಿ ವಾರ್ಡ್ ಗೆ ಒಬ್ಬರಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಗುರುತಿಸಿ ಮಾಡಿರುವವರನ್ನು 198 ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಜು.9ರಂದು ಪ್ರಶಸ್ತಿ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ. ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ನಿರ್ದೇಶನ ನೀಡಲಾಗಿದೆ. ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!
HOW TO APPLY : NEET-UG COUNSELLING 2023