ಸ್ಟಾರ್ಟ್ ಮಾಡುತ್ತಿದ್ದಂತೆ ಹೊತ್ತಿ ಉರಿದ ಎಲೆಕ್ಟ್ರಿಕಲ್ ಬೈಕ್!
– ಚಾಮರಾಜನಗರ ನಗರದಲ್ಲಿ ನಡೆದ ಘಟನೆ
– ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
NAMMUR EXPRESS NEWS
ಚಾಮರಾಜನಗರ: ಚಾರ್ಚ್ ಮಾಡಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಸ್ಟಾರ್ಟ್ ಮಾಡಿದ ವೇಳೆ ಧಗಧಗನೇ ಹೊತ್ತಿ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ. ಕೊತ್ತಲವಾಡಿ ಗ್ರಾಮದ ಬಸವರಾಜಪ್ಪ ಎಂಬವರಿಗೆ ಸೇರಿದ ಬೈಕ್ ಇದಾಗಿದ್ದು ಚಾರ್ಜ್ ಮಾಡಿ ಬೈಕನ್ನು ಸ್ಟಾರ್ಟ್ ಮಾಡಿದ ವೇಳೆ ಹೊಗೆ ಕಾಣಿಸಿಕೊಂಡಿದೆ, ಇದರಿಂದ ಆತಂಕಗೊಂಡು ಹಿಂದೆ ಸರಿದ ವೇಳೆ ದಿಢೀರನೇ ಬೆಂಕಿ ಜ್ವಾಲೆ ಕಾಣಿಸಿಕೊಂಡು ಹೊತ್ತಿ ಉರಿದಿದ್ದು ಅದೃಷ್ಟವಶಾತ್ ಮತ್ತೊಂದು ಬೈಕ್ ಗೆ ಹಾಗೂ ಮನೆಗೆ ಬೆಂಕಿ ವ್ಯಾಪಿಸಿಲ್ಲ. ಕೂಡಲೇ, ಕೆಲ ಯುವಕರು ಸೇರಿ ಉರಿಯುತ್ತಿದ್ದ ಬೈಕ್ ಗೆ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ. ಬೆಳ್ಳಂಬೆಳಗ್ಗೆ ಇ-ಬೈಕ್ ಸವಾರನಿಗೆ ದೊಡ್ಡ ಶಾಕ್ ಕೊಟ್ಟಿದೆ.
ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಬೆಂಗಳೂರಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ. ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ.ಇನ್ನು ಮೂವರು ಕಿಡಿಗೇಡಿಗಳು ಸೇರಿ ಬೆಂಕಿ ಹಚ್ಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಹೈಗೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಕುರಿತು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ : ನಾನು ಬದುಕಿರುವುದೇ ಕಿಮ್ಮನೆಗೆ ಸಹಿಸಲಾಗುತ್ತಿಲ್ಲ

HOW TO APPLY : NEET-UG COUNSELLING 2023