ಪಂಚಾಯಿತಿ ಅಧ್ಯಕ್ಷರ ಅಧಿಕಾರ ಅವಧಿ ಹೆಚ್ಚಳ?!
– ಕಾಯ್ದೆ ತಿದ್ದುಪಡಿಗೆ ಪ್ರಸ್ತಾಪ: ಸಿಎಂ ಸೂಚನೆ
– ಗ್ರಾಪಂ, ತಾಪಂ, ಜಿಪಂ ಅಧ್ಯಕ್ಷರಿಗೆ 5 ವರ್ಷ ಅಧಿಕಾರ
– ಶೀಘ್ರದಲ್ಲಿ ಪಿಡಿಓಗಳ ವರ್ಗಾವಣೆ?
NAMMUR EXPRESS NEWS
ಬೆಂಗಳೂರು: ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷರ ಅಧಿಕಾರದ ಅವಧಿಯನ್ನು ಐದು ವರ್ಷಗಳಿಗೆ ಹೆಚ್ಚಿಸಲು ಕಾಯ್ದೆಗೆ ತಿದ್ದುಪಡಿ ತರುವ ಇದೀಗ ಅಂತಿಮ ಹಂತಕ್ಕೆ ಬಂದಿದೆ.
ಪ್ರಸ್ತಾವವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆಗೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಹಿಂದಿನ ಅವಧಿಯಲ್ಲಿ ರೂಪಿಸಿದ್ದ ಕಾಯ್ದೆಯಂತೆ ಪಂಚಾಯಿತಿ ಅಧ್ಯಕ್ಷರಿಗೆ ಐದು ವರ್ಷಗಳ ಅಧಿಕಾರ ಅವಧಿ ನೀಡಲು ಕಾಯ್ದೆಗೆ ಪುನಃ ತಿದ್ದುಪಡಿ ತರುವ ವಿಷಯ ಸಭೆಯಲ್ಲಿ ಪ್ರಸ್ತಾಪವಾಗಿದೆ.
ಈ ವಿಷಯವನ್ನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಂಡಿಸಿ. ಶಾಸಕರ ಅಭಿಪ್ರಾಯ ಆಲಿಸಿದ ಬಳಿಕ ಮುಂದುವರಿಯೋಣ ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.
ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ರೀತಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲೂ ಪ್ರತಿ 21,000 ಜನಸಂಖ್ಯೆಗೆ ಒಂದು ತಾಲ್ಲೂಕು ಪಂಚಾಯಿತಿ ಕ್ಷೇತ್ರ ರಚಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
ಶೀಘ್ರದಲ್ಲಿ ಪಿಡಿಓಗಳ ವರ್ಗಾವಣೆ?
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆಗೆ ಶಾಸಕರಿಂದ ಮನವಿಗಳು ಬರುತ್ತಲೇ ಇವೆ. ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕಾ ಖರ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ : ತೀರ್ಥಹಳ್ಳಿ ಬಸ್ ಒಳಗೆ ನಾಗರ ಹಾವು!
