ವಾಹನಗಳಿಗೆ ಎಚ್.ಎಸ್. ಆರ್.ಪಿ ನಂಬರ್ ಪ್ಲೇಟ್ ದಿನಾಂಕ 3 ತಿಂಗಳು ವಿಸ್ತರಣೆ!
– ಅಧಿವೇಶನದಲ್ಲಿ ಸಾರಿಗೆ ಸಚಿವರ ಹೇಳಿಕೆ
– ನಮ್ಮೂರ್ ಎಕ್ಸ್ ಪ್ರೆಸ್ ವಿಶೇಷ ವರದಿ ಎಫೆಕ್ಟ್
NAMMUR EXPRESS NEWS
ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಅವಕಾಶವನ್ನು ರಾಜ್ಯದಲ್ಲಿ ಇನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್ಗೆ ಚಾಲನೆ ನೀಡಿದರು. ಸದಸ್ಯ ಮಧು.ಜಿ ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆದೇಶ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದುನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆಯಾಗಲಿದೆ ಎಂದು ಹೇಳಿದರು. ಅತಿ ಸುರಕ್ಷತಾ ನೋಂದಣಿ ಫಲಕಗಳನ್ನು ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ.
ವಾಹನಗಳನ್ನು ಅಪರಾಧ ಎಸಗುವುದನ್ನು ತಡೆಗಟ್ಟುವುದರ ಜೊತೆಗೆ ರಸ್ತೆಯ ಮೇಲೆ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಯೋಜನೆ ಸಂಪೂರ್ಣವಾಗಿ ಪಾರದರ್ಶಕ ಮತ್ತು ಅಧಿಕೃತ ವೆಬ್ಸೈಟ್ ಸೈಟ್ ಆನ್ಲೈನ್ ಮೂಲಕವೇ ವಾಹನ ಸವಾರರು ನೋಂದಣಿ ಮಾಡಿಕೊಳ್ಳಬಹುದೆಂದು ಸಚಿವ ರಾಮಲಿಂಗಾರೆಡ್ಡಿ. ಯಾವುದೇ ಕಾರಣಕ್ಕಾಗಿ ವಾಹನ ಸವಾರರು, ಆರ್ಟಿಒ ಕಚೇರಿ ಇಲ್ಲವೇ ಬೇರೊಂದು ಕಡೆ ನಗದುಕೊಟ್ಟು ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಅಗತ್ಯವಿಲ್ಲ. ಮೋಸ ಮಾಡಿದಲ್ಲಿ ಕಟ್ಟಿನ ಕ್ರಮ ಇದು ನಗದು ರಹಿತ ಮತ್ತು ಆನ್ಲೈನ್ ಮೂಲಕ ನಡೆಯುವ ಪ್ರಕ್ರಿಯೆಯಾಗಿದೆ. ಒಂದು ವೇಳೆ ಯಾರಾದರೂ ನಕಲಿ ವೆಬ್ ಸೈಟ್ ನೋಂದಣಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ಕೊಟ್ಟರು.
ನಮ್ಮೂರ್ ಎಕ್ಸ್ ಪ್ರೆಸ್ ವರದಿ ಮಾಡಿತ್ತು
ನಮ್ಮೂರ್ ಎಕ್ಸ್ ಪ್ರೆಸ್ ಈ ವಂಚನೆ ಬಗ್ಗೆ ವಿಶೇಷ ವರದಿ ಪ್ರಕಟ ಮಾಡಿತ್ತು. ಇದು ರಾಜ್ಯದಲ್ಲಿ ಗಮನ ಸೆಳೆದಿತ್ತು.