ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ!
– ಯಾರಿಗೆ ಸಿಗುತ್ತೆ ಲ್ಯಾಪ್ ಟಾಪ್? ಇಲ್ಲಿದೆ ಡೀಟೇಲ್ಸ್
NAMMUR EXPRESS NEWS
ಬೆಂಗಳೂರು: ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಲ್ಯಾಪ್ ಟಾಪ್ ನೀಡಲು ಮುಂದಾಗಿದೆ. ಅದರಲ್ಲೂ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಉಚಿತ ಲ್ಯಾಪ್ ಟಾಪ್ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ.
ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿಯು ಕೈಗಾರಿಕೋದ್ಯಮಿಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ.