70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ವೈದ್ಯಕೀಯ ಸೇವೆ!
* ಕೇಂದ್ರ ಸರ್ಕಾರ ಮಹತ್ವದ ಘೋಷಣೆ!
* ಅರ್ಜಿ ಸಲ್ಲಿಕೆ ಹೇಗೆ?
NAMMUR EXPRESS NEWS
ಬೆಂಗಳೂರು: ಆಯುಷ್ಮಾನ್ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರಿಗೂ ಉಚಿತ ಚಿಕಿತ್ಸೆ ನೀಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. 70 ವರ್ಷ ಮೇಲ್ಪಟ್ಟ ಎಲ್ಲರಿಗೂ ವಾರ್ಷಿಕ ಆದಾಯ ಲೆಕ್ಕಿಸದೆ ವರ್ಷಕ್ಕೆ ರೂ.5 ಲಕ್ಷದವರೆಗೆ ಉಚಿತ ವೈದ್ಯಕೀಯ ಸೇವೆ ಒದಗಿಸಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಹೊಸ ನಿರ್ಧಾರದ ಅನ್ವಯ ಈಗ 70 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಇದುವರೆಗೆ ಈ ಯೋಜನೆಯ ವ್ಯಾಪ್ತಿಯಿಂದ ಹೊರಗಿರುವವರೂ ಸಹ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಆದರೆ ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ಆಯುಷ್ಮಾನ್ ಕಾರ್ಡ್ ಕಡ್ಡಾಯಗೊಳಿಸಿದೆ.
ಇಲ್ಲಿಯವರೆಗೆ ಈ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ವರ್ಷಕ್ಕೆ 5 ಲಕ್ಷದವರೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಲಾಗುತ್ತಿತ್ತು. ದೇಶದ ಲಕ್ಷಾಂತರ ಬಡ ತ್ತು ವಚಿತ ಕುಟುಂಬಗಳು ಈ ಯೋಜನೆಯ ದುಪಯೋಗ ಡೆದುಕೊಂಡಿವೆ. ಸಧ್ಯ ಇದೇ ಯೋಜನೆ ಅಡಿಯಲ್ಲಿ 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೂ ಈಗ 5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ಎಂದು ಸರ್ಕಾರ ಘೋಷಿಸಿದ ಜೊತೆಗೆ ಆಯುಷ್ಮಾನ್ ಭಾರತ್ ಕಾರ್ಡ್ ಕೂಡ ಕಡ್ಡಾಯ ಎಂದು ಹೇಳಿದೆ.
* ಅರ್ಜಿ ಸಲ್ಲಿಕೆ ಹೇಗೆ?
ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಈ ಯೋಜನೆಗೆ ಅರ್ಹರಾಗಿದ್ದೀರಾ ಅಥವಾ ಇಲ್ಲವೇ ಎಂಬುದನ್ನು ವಿಭಾಗಕ್ಕೆ ಹೋಗುವ ಮೂಲಕ ನಿಮ್ಮ ಹೆಸರನ್ನು ಪರಿಶೀಲಿಸಬಹುದು. ಇದಕ್ಕಾಗಿ ಮೊಬೈಲ್ ಸಂಖ್ಯೆ, ಪಡಿತರ ಚೀಟಿ ಅಥವಾ ಆಧಾರ್ ಕಾರ್ಡ್ ಬಳಸಬೇಕು.