Categories
ಬೆಂಗಳೂರು

ಸೆ.18ರ ಗಣೇಶ ಚತುರ್ಥಿ: ಎಲ್ಲೆಡೆ ಹೈ ಅಲರ್ಟ್!

ಸೆ.18ರ ಗಣೇಶ ಚತುರ್ಥಿ: ಎಲ್ಲೆಡೆ ಹೈ ಅಲರ್ಟ್!
– ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
– ಗಣೇಶೋತ್ಸವಕ್ಕೆ ಪೊಲೀಸ್ ಭದ್ರತೆ
– ಕಾನೂನು ಮೀರಿದರೆ ಆಯೋಜಕರ ಮೇಲೆ ಕೇಸ್

NAMMUR EXPRESS NEWS
ಬೆಂಗಳೂರು: ಸೆಪ್ಟೆಂಬರ್.18ರಂದು “ಗಣೇಶ ಚತುರ್ಥಿ” ದಿನದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಇನ್ನು ಗಣೇಶ ಹಬ್ಬದ ಹಿನ್ನೆಲೆ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಶಾಂತಿಯುತವಾಗಿ ಹಬ್ಬ ಆಚರಣೆಗೆ ಪೊಲೀಸ್ ಇಲಾಖೆ ತಾಲೂಕು ಮಟ್ಟದಲ್ಲಿ ಸೂಚನೆ ನೀಡಲಾಗಿದೆ. ಗಣೇಶ ಹಬ್ಬ ಆಚರಣೆಗೆ ಎಲ್ಲಾ ಪರವಾನಗಿ ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ಇನ್ನು ಪೊಲೀಸ್ ಇಲಾಖೆ ಎಲ್ಲಾ ರೀತಿಯಲ್ಲೂ ಸಿದ್ಧತೆ ನಡೆಸಿದೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಮೀರಿದರೆ ಆಯೋಜಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಪ್ರತಿ ಹಳ್ಳಿಯಲ್ಲು ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ಪೊಲೀಸ್ ಇಲಾಖೆ ಸೂಚಿಸಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.