Categories
ಬೆಂಗಳೂರು

ಕನ್ನಡಿಗರಿಗೆ ಗುಡ್ ನ್ಯೂಸ್..!

ಕನ್ನಡಿಗರಿಗೆ ಗುಡ್ ನ್ಯೂಸ್..! 
– ಏರ್‌ಪೋರ್‌ ವೆಬ್‌ಸೈಟ್‌ ಇನ್ನು ಕನ್ನಡ ಭಾಷೆಯಲ್ಲಿ ಕೂಡ ಲಭ್ಯ!
– ಕನ್ನಡದಲ್ಲೇ ವಿಮಾನ ಹಾರಾಟ ಸೇರಿ ವಿವಿಧ ಮಾಹಿತಿ

NAMMUR EXPRESS NEWS
ಬೆಂಗಳೂರು : ವಿಮಾನಯಾನ ಸೇವೆಯಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಲು ಮುಂದಾಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆ (ಬಿಐಎಎಲ್) ತನ್ನ ಅಂತರ್ಜಾಲದಲ್ಲಿ ಆಂಗ್ಲ ಭಾಷೆಯ ಜತೆಗೆ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸಿದೆ. ಈವರೆಗೆ ತನ್ನ ಅಂತರ್ಜಾಲದಲ್ಲಿ ಕನ್ನಡ ಭಾಷೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದ ಬಿಐಎಎಲ್ ಇದೀಗ ಕನ್ನಡ ಭಾಷೆಯಲ್ಲೂ ಮಾಹಿತಿ ದೊರೆಯುವಂತೆ ಮಾಡಿದೆ. ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸುವ ಮೂಲಕ ವಿಮಾನಯಾನ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ಉದ್ದೇಶ ಬಿಐಎಎಲ್ ಹೊಂದಿದೆ. ಅದರಂತೆ ವಿಮಾನ ಹಾರಾಟದ ಮಾಹಿತಿ, ನಿರ್ಗಮನ, ಆಗಮನ ಮತ್ತು ವಿಳಂಬಗಳ ಕುರಿತು ಮಾಹಿತಿಗಳನ್ನು ಕನ್ನಡದಲ್ಲಿಯೇ ನೀಡಲಾಗುತ್ತದೆ. ಜತೆಗೆ ವಿಮಾನಗಳನ್ನು ಕಾಯ್ದಿರಿಸಲು, ವಿಮಾನ ನಿಲ್ದಾಣಕ್ಕೆ ತೆರಳಲು ಅಥವಾ ಅಲ್ಲಿಂದ ಬರಲು ಸಾರಿಗೆ ಆಯ್ಕೆ, ಭದ್ರತಾ ಕಾರ್ಯವಿಧಾನ, ಬ್ಯಾಗೇಜ್ ನಿಯಮಗಳು ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಕನ್ನಡದಲ್ಲಿಯೇ ನೀಡುವ ವ್ಯವಸ್ಥೆ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಬಿಐಎಎಲ್ ನ ವ್ಯವಸ್ಥಾಪಕ ನಿರ್ದೇಶಕ ಹರಿಮಾರಾರ್, ಸ್ಥಳೀಯ ಭಾಷೆಯಲ್ಲಿಯೇ ವಿಮಾನ ನಿಲ್ದಾಣದ ಮಾಹಿತಿ ನೀಡಲು ಅಂತರ್ಜಾಲದಲ್ಲಿ ಕನ್ನಡ ಭಾಷಾ ಆಯ್ಕೆಯನ್ನು ಪರಿಚಯಿಸಲಾಗಿದೆ. ಆ ಮೂಲಕ ನಮ್ಮ ಭಾಷಾ ಪರಂಪರೆಯ ಶ್ರೀಮಂತಿಕೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.