ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!
– ವಿವಿ, ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯುವಂತಿಲ್ಲ
– ರಾಜ್ಯ ಸರ್ಕಾರ ಸುತ್ತೋಲೆ
NAMMUR EXPRESS NEWS
ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಸಮುದಾಯ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯದಂತೆ ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಸುತ್ತೋಲೆ ಹೊರಡಿಸಿದೆ.
ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಒಳಗಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ. ಸರ್ಕಾರ ಆಯಾ ಕೋರ್ಸಿಗೆ ನಿಗದಿ ಮಾಡಿರುವ ಕಾಲೇಜು ಶುಲ್ಕವನ್ನು ಮಾರುಪಾವತಿ ಮಾಡಲಾಗುತ್ತಿದೆ ಹಾಗೂ ಸದರಿ ಮೊತ್ತವನ್ನು ವಿದ್ಯಾರ್ಥಿಯು ತನ್ನ ಖಾತೆಗೆ ಜಮೆಯಾದ ನಂತರದಲ್ಲಿ ಸಂಬಂಧಪಟ್ಟ ಕಾಲೇಜಿಗೆ ಪಾವತಿಸಲು ಸೂಚಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ, ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸ್ನಾತಕ/ಸ್ನಾತಕೋತ್ತರ/ಡಿಪ್ಲಮೋ/ಪಾಲಿಟೆಕ್ನಿಕ್/ ವೃತ್ತಿಪರ ಕೋರ್ಸ – ವೈದ್ಯಕೀಯ, ಇಂಜನಿಯರಿಂಗ್, ಹಾಗೂ ಅಲೈಡ್ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಯಾವುದೇ ಶುಲ್ಕವನ್ನು ಕಡ್ಡಾಯವಾಗಿ ಪ್ರವೇಶಾತಿ ಸಮಯದಲ್ಲಿ ಪಾವತಿ ಮಾಡುವಂತ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರು ವಿಶ್ವವಿದ್ಯಾಲಯದ ಮುಖ್ಯಸ್ಥರು ಒತ್ತಾಯ ಮಾಡಬಾರದೆಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಇದನ್ನೂ ಓದಿ : ಲಕ್ಷಕ್ಕೆ ಬರುತ್ತಾ ಅಡಿಕೆ ದರ?
HOW TO APPLY : NEET-UG COUNSELLING 2023