Categories
ಬೆಂಗಳೂರು

ಶಾಲಾ ಮಕ್ಕಳು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್!

ಶಾಲಾ ಮಕ್ಕಳು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್!
-ಇಂದಿರಾ ಕ್ಯಾಂಟೀನ್, ಬಿಸಿಯೂಟಕ್ಕೆ ಸಿರಿಧಾನ್ಯ ಬಳಕೆ!
-ಸಿರಿಧಾನ್ಯಕ್ಕೆ ಪ್ರೋತ್ಸಾಹಕ ಕೇಂದ್ರ ಸ್ಥಾಪನೆಯ ಭರವಸೆ!

NAMMUR EXPRESS NEWS
ಬೆಂಗಳೂರು: ಸಿರಿಧಾನ್ಯಕ್ಕೆ ಇನ್ನಷ್ಟು ಒತ್ತು ನೀಡುವ ನಿಟ್ಟಿನಲ್ಲಿ ಇಂದಿರಾ ಕ್ಯಾಂಟೀನ್ ಹಾಗೂ ಬಿಸಿಯೂಟ ಯೋಜನೆಯಲ್ಲಿ ಸಿರಿಧಾನ್ಯ ಬಳಸಲು ಶೀಘ್ರದಲ್ಲಿಯೇ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ- 2024 ಉದ್ಘಾಟಿಸಿ ಮಾತನಾಡಿ, ರಾಜ್ಯದ ಜನ ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ, ಆರೋಗ್ಯ ವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ನಿರ್ಧಾರ ತೆಗೆದು ಕೊಳ್ಳಲಾಗುವುದು ಎಂದು ಹೇಳಿದರು.

ಸಿರಿಧಾನ್ಯ ಬೆಳೆದು ಬಳಸುವ ಮೂಲಕ ಸುಸ್ಥಿರ ಆಹಾರ ವ್ಯವಸ್ಥೆಯಲ್ಲಿ ಸುಧಾರಣೆಯಾಗಲಿದೆ. ಈ ಬಗ್ಗೆ ಜನರಲ್ಲಿ ಮತ್ತಷ್ಟು ಅರಿವು ಮೂಡಿಸಬೇಕಿದೆ. ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಸ್ತೆಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರಕಾರ ಸ್ಥಾಪಿಸಲಿದೆ ಎಂದು ಭರವಸೆ ನೀಡಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಸಿರಿಧಾನ್ಯಗಳ ರಾಜ್ಯ ಕರ್ನಾಟಕ ಆಗಿದೆ.

ಪ್ರಸ್ತುತ ಕಾಲಘಟ್ಟ ದಲ್ಲಿ ಸಿರಿಧಾನ್ಯಗಳ ಮಹತ್ವದ ಬಗ್ಗೆ ಜನರಿಗೆ ಅರಿವಾಗುತ್ತಿದೆ. ಸಿರಿಧ್ಯಾನಗಳ ಬೀಜ, ಮೌಲ್ಯವರ್ಧನೆ ಹಾಗೂ ಸಂಸ್ಕರಣೆಯ ವಸ್ತುಗಳು ವಿಶ್ವದಲ್ಲಿ ಬೇಡಿಕೆಯಿದೆ. 33 ಸಾವಿರ ಕೋಟಿ ರು. ವೆಚ್ಚದಲ್ಲಿ ಆಹಾರ ಸಂಸ್ಕರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಸಾವಯವ ಹಾಗೂ ಆಹಾರ ಸಂಸ್ಕರಣೆ ಬಗ್ಗೆ ಯೋಜನಾ ವರದಿ ಸಿದ್ಧಪಡಿಸಿ ನೀಡಿದರೆ, ಕೇಂದ್ರದಿಂದ ಅದಕ್ಕೆ ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.