Categories
ಬೆಂಗಳೂರು ರಾಜ್ಯ

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್
• ಏಪ್ರಿಲ್ 1ರಿಂದ BPL, APL ಕಾರ್ಡ್​ ವಿತರಣೆ
– ಅಕ್ಕಿಯ ಹಣ ಬರದೇ ಇದ್ದವರಿಗೆ ಶೀಘ್ರದಲ್ಲಿ ಪರಿಹಾರ.

NAMMUR EXPRESS NEWS
ಬೆಂಗಳೂರು : ರಾಜ್ಯದ ಜನತೆಗೆ ಆಹಾರ ಇಲಾಖೆ ಸಿಹಿ ಸುದ್ದಿ ಒಂದನ್ನು ನೀಡಿದ್ದು ಹೊಸದಾಗಿ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಿರುವವರಿಗೆ ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1 ರಿಂದ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು. ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್​ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಿದ್ದೇವೆ.

ಇನ್ನು 5 ಕೆಜಿ ಅಕ್ಕಿಯ ಹಣ ಬರದವರಿಗೆ ಅರಿಯರ್ಸ್ ಕೊಡುವ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಆದರೆ 100ಕ್ಕೆ 90ರಷ್ಟು ಪಡಿತರ ಕಾರ್ಡ್‌ದಾರರಿಗೆ ಐದು ಕೆಜಿ ಅಕ್ಕಿಯ ಹಣ ಕೊಟ್ಟಿದ್ದೇವೆ. ಶೇ 5 ರಷ್ಟು ಏರುಪೇರು ಇದರಲ್ಲಿ ಇದೆ, ಅದನ್ನೂ ಸರಿಪಡಿಸುತ್ತೇವೆ. ಹೊಸ ಕಾರ್ಡ್​ಗಳಿಗೆ ಅರ್ಜಿ ಬಂದರೆ ತಡ ಮಾಡದೆ ಒಂದು ವಾರದೊಳಗೆ ಕಾರ್ಡ್ ವಿತರಣೆ ಮಾಡುವ ಕ್ರಮ ಕೈಗೊಳ್ಳುತ್ತೇವೆ ಎಂದು ಸದನಕ್ಕೆ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.