Categories
ಬೆಂಗಳೂರು ರಾಜ್ಯ

ಮಹಿಳಾ ದಿನದಂದು ಮಹಿಳೆಯರಿಗೆ ಭರ್ಜರಿ ಕೊಡುಗೆ..!

ಮಹಿಳಾ ದಿನದಂದು ಮಹಿಳೆಯರಿಗೆ ಭರ್ಜರಿ ಕೊಡುಗೆ..!
– ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ.!
– 2025 ರವರೆಗೆ ಎಲ್ ಪಿಜಿ ಸಬ್ಸಿಡಿ 300 ರೂ. ಗೆ ಹೆಚ್ಚಳ

NAMMUR EXPRESS NEWS
ಬೆಂಗಳೂರು: ಮಹಿಳಾ ದಿನಾಚರಣೆಯ ದಿನದಂದೇ ಕೇಂದ್ರ ಸರಕಾರ ಮಹಿಳೆಯರಿಗೆ ಗುಡ್‌ನ್ಯೂಸ್ ಕೊಟ್ಟಿದೆ. 2024 ರ ಲೋಕಸಭೆ ಚುನಾವಣೆಗೆ ಮುನ್ನ ಉಜ್ವಲ ಯೋಜನೆಯಡಿ ಬಡ ಮಹಿಳೆಯರಿಗೆ ಪ್ರತಿ ಎಲ್‌ಪಿಜಿ ಸಿಲಿಂಡ‌ರ್ ಸಬ್ಸಿಡಿಗೆ 300 ರೂಪಾಯಿಗಳನ್ನು ಮುಂದಿನ ಹಣಕಾಸು ವರ್ಷಕ್ಕೆ ಏಪ್ರಿಲ್ 1 ರಿಂದ ವಿಸ್ತರಿಸುವುದಾಗಿ ಸರ್ಕಾರ ಗುರುವಾರ ಘೋಷಿಸಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸರ್ಕಾರವು ಪ್ರತಿ ವರ್ಷಕ್ಕೆ 14.2 ಕೆಜಿ ಸಿಲಿಂಡರ್‌ಗೆ 12 ರೀಫಿಲ್ ಗಳಿಗೆ ಸಿಲಿಂಡರ್‌ಗೆ 200 ರೂ.ಘೋಷಣೆ ಮಾಡಿತ್ತು. ಇದೀಗ ಸಬ್ಸಿಡಿ ಮೊತ್ತವನ್ನು 300 ರೂ.ಕ್ಕೆ ಹೆಚ್ಚಳ ಮಾಡಿ ಮಾರ್ಚ್ 31ಕ್ಕೆ ಕೊನೆಗೊಳ್ಳಲಿದೆ. ಆದರೆ ಈ ಯೋಜನೆಯನ್ನು ಇನ್ನೂ ಎರಡು ವರ್ಷಗಳ ಅವಧಿಗೆ ವಿಸ್ತರಣೆ ಮಾಡಿದೆ.5 ರವರೆಗೆ 300 ರೂಪಾಯಿ LPG ಸಬ್ಸಿಡಿಯನ್ನು ವಿಸ್ತರಿಸಿದೆ.

ಕೇಂದ್ರ ಸರಕಾರದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಈಗ ಈ ಸಬ್ಸಿಡಿಯನ್ನು 2024- 25ರವರೆಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಯೋಜನೆಯ ವಿಸ್ತರಣೆಯಿಂದಾಗಿ ಸುಮಾರು 10 ಕೋಟಿ ಕುಟುಂಬಗಳಿಗೆ ಅನುಕೂಲವಾಗಲಿದೆ. ಅಲ್ಲದೇ ಸರಕಾರಕ್ಕೆ ಸುಮಾರು 12,000 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ.

ಲೋಕಸಭೆ ಚುನಾವಣೆ 2024 ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿದೆ. ಗ್ರಾಮೀಣ ಮತ್ತು ವಂಚಿತ ಬಡ ಕುಟುಂಬಗಳಿಗೆ ಶುದ್ಧವಾದ ಅಡುಗೆ ಇಂಧನವಾದ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ ಲಭ್ಯವಾಗುವಂತೆ ಮಾಡಲು, ಬಡ ಕುಟುಂಬಗಳ ವಯಸ್ಕ ಮಹಿಳೆಯರಿಗೆ ಠೇವಣಿ-ಮುಕ್ತ ಎಲ್ ಪಿಜಿ ಸಂಪರ್ಕಗಳನ್ನು ಒದಗಿಸಲು ಸರ್ಕಾರವು ಮೇ 2016 ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಜಾರಿಗೆ ತಂದಿತ್ತು. ಈಗಾಗಲೇ ಮಹಿಳೆಯರಿಗೆ ಉಚಿತವಾಗಿ ಗ್ಯಾಸ್‌ ಸಂಪರ್ಕವನ್ನು ನೀಡಲಾಗಿದ್ದು, ಇದೀಗ ಸಬ್ಸಿಡಿ ಮೊತ್ತವನ್ನು ನೀಡಲಾಗುತ್ತಿದೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುನ್ನ, ಸರ್ಕಾರವು ಆಗಸ್ಟ್ ಅಂತ್ಯದಲ್ಲಿ ಅಡುಗೆ ಅನಿಲ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 200 ರೂ. ಇದಾದ ಬಳಿಕ ಎಲ್ ಪಿಜಿ ಸಿಲಿಂಡರ್ ದರ 903 ರೂ.ಗೆ ಇಳಿಯಲಿದೆ. ಉಜ್ವಲ ಫಲಾನುಭವಿಗಳಿಗೆ ಸಿಲಿಂಡರ್‌ಗೆ 300 ರೂ.ಗಳ ಸಬ್ಸಿಡಿಯನ್ನು ಪರಿಗಣಿಸಿ ಬೆಲೆ 603 ರೂ.ಗಳಾಗಿದ್ದು, ಸಬ್ಸಿಡಿ ಮೊತ್ತ ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ವರ್ಗಾವಣೆ ಆಗಲಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.