ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹ ಲಕ್ಷ್ಮಿ ಹಣ?
– ಎರಡು ತಿಂಗಳ 4000 ರೂ.ಹಣ ಒಟ್ಟಿಗೆ ಜಮೆ
– ಸರ್ಕಾರ ಹೇಳಿದ್ದೇನು? ಯಾವಾಗ ಸಿಗುತ್ತೆ ಹಣ?
NAMMUR EXPRESS NEWS
ಬೆಂಗಳೂರು : ಕಾಂಗ್ರೆಸ್ ಸರಕಾರ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಎರಡು ಕಂತಿನ ಹಣ ಇನ್ನೂ ಜಮೆ ಆಗಿಲ್ಲ. ವರಮಹಾಲಕ್ಷ್ಮಿ ಹಬ್ಬದಂದು ಮಹಿಳೆಯರ ಖಾತೆಗೆ ಹಣ ಜಮೆ ಆಗೋದು ಖಚಿತ ಎನ್ನಲಾಗುತ್ತಿದೆ.
ಲೋಕ ಸಭೆ ಚುನಾವಣೆ ವೇಳೆ ಹಣ ಜಮೆ ಆಗಿತ್ತು. ಗೃಹಲಕ್ಷ್ಮೀ ಯೋಜನೆಯ ಜೂನ್, ಜುಲೈ ತಿಂಗಳ ಒಟ್ಟು 4000 ರೂಪಾಯಿ ಹಣ ಗೃಹಿಣಿಯರ ಖಾತೆಗೆ ಜಮೆ ಆಗೋದಕ್ಕೆ ಬಾಕಿ ಇದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಈ ಮಾಹಿತಿ ನೀಡಿದ್ದಾರೆ.
ಈ ಹಿಂದೆ ಜುಲೈ ಅಂತ್ಯದಲ್ಲಿ ಅಥವಾ ಅಗಸ್ಟ್ ಮೊದಲ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಆಗುತ್ತೆ ಅಂತಾ ಹೇಳಲಾಗಿತ್ತು. ಆದ್ರೆ ಅಗಸ್ಟ್ ಅರ್ಧ ತಿಂಗಳು ಕಳೆದರೂ ಕೂಡ ಹಣ ಮಾತ್ರ ಸಿಕ್ಕಿಲ್ಲ. ಇನ್ನು ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಈ ಬಾರಿ ಎರಡು ತಿಂಗಳ ಹಣ ಒಟ್ಟಿಗೆ ಜಮೆ ಆಗಲಿದೆ ಎನ್ನಲಾಗುತ್ತಿದೆ. ಜೂನ್ ಮತ್ತು ಜುಲೈ ತಿಂಗಳ ಒಟ್ಟು 4೦೦೦ ರೂಪಾಯಿ ವರಮಹಾಲಕ್ಷ್ಮೀ ಹಬ್ಬದ ಗಿಫ್ಟ್ ಆಗಿ ಸಿಗಲಿದೆ.