Categories
ಬೆಂಗಳೂರು

ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು

ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು
– ಶ್ವಾಸಕೋಶ ಸೋಂಕಿನಿಂದ ಅನಾರೋಗ್ಯ
– ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳುವ ಸಾಧ್ಯತೆ

NAMMUR EXPRESS NEWS
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ. ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅವರು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು, ಕೆಮ್ಮು ಕಡಿಮೆಯಾಗುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರು ವಿದೇಶಕ್ಕೆ ತೆರಳುವ ಸಾಧ್ಯತೆಯಿದೆ ಎನ್ನಲಾಗಿದೆ. ಹೆಚ್.ಡಿ ಕುಮಾರಸ್ವಾಮಿ ಕೆಲಸದ ಒತ್ತಡ, ನಿರಂತರ ಪ್ರವಾಸಗಳಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು.
ಇತ್ತೀಚಿಗೆ ತಾನೇ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಸ್ವಲ್ಪ ದಿನ ವಿಶ್ರಾಂತಿ ಪಡೆದು ನಂತರ ರಾಜಕೀಯ ಚಟುವಟಿಕೆಗಳಿಗೆ ಮರಳಿದ್ದರು. ಇದೀಗ ಮತ್ತೆ ಅವರಿಗೆ ಚಿಕಿತ್ಸೆಯ ಅಗತ್ಯವಿದೆ. ವಿದೇಶದಲ್ಲಿ ಎರಡು ವಾರಗಳ ಕಾಲ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.