ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ..!!
– 14 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ
– ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭಾರೀ ಮಳೆ, ಜನರ ಪರದಾಟ
NAMMUR EXPRESS NEWS
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದು ಮತ್ತು ನಾಳೆ ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ. 20, 21 ರಂದು ಬಾಗಲಕೋಟೆ, ಬೀದರ್, ಧಾರಾವಾಡ, ಗದಗ, ಹಾವೇರಿ ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.
ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಿಗೆ ಮುಂದಿನ ಎರಡೂರು ದಿನಕ್ಕೆ, ಕರಾವಳಿ ಜಿಲ್ಲೆಗಳಿಗೆ ಇಡೀ ವಾರಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿ ಮೇ23 ರಿಂದ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಬೆಂಗಳೂರಲ್ಲಿ ಭಾರೀ ಮಳೆಯಾಗುತ್ತಿದೆ, ರಸ್ತೆ ತುಂಬಾ ನೀರು ನಿಂತಿದೆ. ಜನರ ಪರದಾಟ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದೂವರೆ ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹೆಬ್ಬಾಳ, ಮಲ್ಲೇಶ್ವರಂ, ವಿಜಯನಗರ, ಯಶವಂತಪುರ, ಮೆಜೆಸ್ಟಿಕ್, ನಾಗವಾರ, ಕಾರ್ಪೊರೇಷನ್, ಚಾಮರಾಜಪೇಟೆ, ಶಿವಾಜಿನಗರ, ಕೆ.ಆರ್. ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನ ಜನರ ರಾತ್ರಿಯ ನಿದ್ದೆ ಹಾಳಾಗಿದೆ. ಮೆಜೆಸ್ಟಿಕ್‌ನಂತಹ ಕೇಂದ್ರ ಪ್ರದೇಶಗಳಲ್ಲಿ ಬಸ್ ನಿಲ್ದಾಣಗಳು ಕೆರೆಯಂತಾಗಿದ್ದು, ಪ್ರಯಾಣಿಕರು ಕಾಯುವ ಸ್ಥಳವಿಲ್ಲದೇ ಪರಿತಪಿಸುತ್ತಿದ್ದಾರೆ. ಹವಾಮಾನ ಇಲಾಖೆಯು ಮುಂದಿನ ಕೆಲ ಗಂಟೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.