Categories
ಬೆಂಗಳೂರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ!
– ಚುಮು ಚುಮು ಚಳಿ ನಡುವೆ ಈಗ ಮಳೆ
– ಕರಾವಳಿ, ಮಲೆನಾಡಲ್ಲಿ ಭತ್ತ, ಅಡಿಕೆಗೆ ಎಫೆಕ್ಟ್

NAMMUR EXPRESS NEWS
ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದಲ್ಲಿ ಮಳೆ ಮತ್ತೆ ಸುರಿಯುತ್ತಿದೆ. ಈ ನಡುವೆ ನ.4 ರಿಂದ 7ರವರೆಗೆ ಕರ್ನಾಟಕದ ಅನೇಕ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಳಿಗಾಲದ ಪರಿಣಾಮ ಕರ್ನಾಟಕ ರಾಜ್ಯಾದ್ಯಂತ ಹಲವೆಡೆ ಚಳಿ ಶುರುವಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇದ್ದು, ಗರಿಷ್ಠ ಉಷ್ಣಾಂಶವು ಕೊಂಚ ಏರಿಕೆಯಾಗಿದೆ. ಹಾಗೆಯೇ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ನವೆಂಬರ್ 4 ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು, ಗಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಮಲೆನಾಡು, ಕರಾವಳಿಯಲ್ಲಿ ರೈತರಿಗೆ ಆತಂಕ!

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೀಗ ಭತ್ತದ ಕಟಾವು ಕಾರ್ಯ ಆರಂಭಗೊಂಡಿದೆ. ಆದರೆ ಹವಾಮಾನ ಇಲಾಖೆ ಕರ್ನಾಟಕ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಮುನ್ಸೂಚನೆ ನೀಡಿದೆ. ಇದರಿಂದಾಗಿ ಭತ್ತದ ಕಟಾವು ಕಾರ್ಯ ನಡೆಸುತ್ತಿರುವ ರೈತರಿಗೆ ಆತಂಕ ಶುರುವಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೃಷಿಕರ ಜೀವನಾಧಾರವಾಗಿರುವುದು ಭತ್ತ. ಈ ಬಾರಿ ಮಳೆಯ ಕಣ್ಣಾಮುಚ್ಚಾಲೆ ಆಟದಿಂದಾಗಿ ಭತ್ತದ ಕೃಷಿಗೆ ಮಳೆಯ ಕೊರತೆ ಉಂಟಾಗಿತ್ತು. ಜೂನ್‌, ಜುಲೈ ತಿಂಗಳಲ್ಲಿ ಕೈಕೊಟ್ಟಿದ್ದ ಮಳೆ ಸೆಪ್ಟೆಂಬರ್‌ನಲ್ಲಿ ಸುರಿದಿತ್ತು. ಭತ್ತ ತೆಲೆ ಮೂಡುವ ಹೊತ್ತಲ್ಲೆ ಮಳೆಯಾಗಿರುವುದು ಭತ್ತದ ಇಳುವರಿ ಕಡಿಮೆಯಾಗಿದೆ.

ಮಲೆನಾಡಲ್ಲಿ ಅಡಿಕೆ ಕೊಯ್ಲು ಶುರು

ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಭಾಗದಲ್ಲಿ ಅಡಿಕೆ ಕೊಯ್ಲು ಶುರುವಾಗಿದೆ. ಇದರಿಂದ ಮಳೆ ಬಂದಲ್ಲಿ ರೈತರಿಗೆ ತೊಂದರೆ ಆಗಲಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.