ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್..!!
– ಮಳೆಗಾಲದ ಬಳಿಕ ಜಿಪಂ, ತಾಪಂ ಚುನಾವಣೆ ದಿನಾಂಕ?
NAMMUR EXPRESS NEWS
ಬೆಂಗಳೂರು : ರಾಜ್ಯದಲ್ಲಿ ಮಳೆಗಾಲದ ನಂತರ ಜಿಪಂ ಹಾಗೂ ತಾಪಂ ಚುನಾವಣೆ ನಡೆಸುವ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಮಳೆಗಾಲದ ನಂತರ ಪ್ರತ್ಯೇಕ ಸಭೆ ನಡೆಸಿ ಸಿದ್ಧತೆ ಹಾಗೂ ದಿನಾಂಕ ನಿಗದಿ ಕುರಿತು ತೀರ್ಮಾನಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಷಯ ಪ್ರಸ್ತಾವನೆ ಮಾಡಿದರು.
2021ರಿಂದಲೂ ಜಿಪಂ ಹಾಗೂ ತಾಪಂ ಕ್ಷೇತ್ರಗಳಿಗೆ ಚುನಾವಣೆ ನಡೆದಿಲ್ಲ. ರಾಜ್ಯದ 31 ಜಿಲ್ಲೆಗಳ 1,130 ಜಿಪಂ ಹಾಗೂ 239 ತಾ ಲೂಕುಗಳ 3,671 ತಾಪಂ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ. ಈ ಬಗ್ಗೆ ನ್ಯಾಯಾಲಯದಿಂದಲೂ ತೀವ್ರ ಒತ್ತಡ ಇದೆ. ಹೀಗಾಗಿ ತ್ವರಿತವಾಗಿ ಚುನಾವಣೆಗೆ ಸಿದ್ಧತೆ ನಡೆಸಬೇಕು.