Categories
ಬೆಂಗಳೂರು

ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್?

ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್?

* ಸಚಿವ ಸ್ಥಾನ ಪಡೆದಿದ್ದ ಮುನಿರತ್ನ: ಸಂತ್ರಸ್ತೆಯಿಂದ ಬಾಂಬ್!
* ಎಸಿಪಿ, ಸಿಪಿಐ ಅಧಿಕಾರಿಗಳನ್ನೂ ಕೂಡ ಹನಿಟ್ರ್ಯಾಪ್?

NAMMUR EXPRESS NEWS
ಬೆಂಗಳೂರು: ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟರೆ ಆ ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುತ್ತೇನೆ ಎಂದು ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ತ ಮಹಿಳೆ ಹೊಸ ಬಾಂಬ್‌ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸತ್ರ ಮಹಿಳೆ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್‌ ಮಾಡಿ ಟಾರ್ಚರ್ ನೀಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮುನಿರತ್ನ ಅವರ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಶಾಸಕರು ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ಎಸಿಪಿ, ಸಿಪಿಐ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ನನ್ನ ಹಾಗೂ ಮುನಿರತ್ನ ಬ್ರೈನ್ ಮ್ಯಾಪಿಂಗ್ ಮಾಡಿಸಲಿ ಎಂದು ಶಾಸಕ ಅಶ್ವತ್ಥನಾರಾಯಣ, ಹಾಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಗೆ ಸಂತ್ರಸ್ಥೆ ಚಾಲೆಂಜ್ ಮಾಡಿದ್ದಾರೆ.
ಅನೇಕ ಮಹಿಳೆಯರನ್ನು ಶಾಸಕ ಮುನಿರತ್ನ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಲವು ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲು ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ವಿಜಯೇಂದ್ರ 10 ನಿಮಿಷ ಅಪಾಯಿಂಟ್ ಮೆಂಟ್ ಬೇಕಿದೆ. ಹತ್ತೇ ಹತ್ತು ನಿಮಿಷ ಅವರ ಜೊತೆ ಮಾತಾಡಬೇಕು. ಇದಕ್ಕೆ ಅವಕಾಶ ಮಾಡಿಕೊಡಿ ಎಂದರು. ಇಷ್ಟೆಲ್ಲ ಆದ್ರೂ ಮುನಿರತ್ನ ಪಕ್ಷದಲ್ಲಿ ಇರಿಸಿಕೊಂಡಿದ್ದೀರಲ್ಲ ಎಂದು ಕೇಳಬೇಕಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.