ದಿಡೀರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ. ಎನ್ ರಾಜಣ್ಣ…!!
– ರಾಜ್ಯ ರಾಜಕಾರಣ ಮಹತ್ವದ ಬದಲಾವಣೆ ಇಂದು ಸಾಕ್ಷಿ
– ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರಿಗೆ ರಾಜೀನಾಮೆ ಎಂಬ ಚರ್ಚೆ
NAMMUR EXPRESS NEWS
ಬೆಂಗಳೂರು : ರಾಜ್ಯ ರಾಜಕಾರಣ ಮಹತ್ವದ ಬದಲಾವಣೆ ಇಂದು ಸಾಕ್ಷಿ ಯಾಗಿದೆ. ಸಚಿವ ಸ್ಥಾನಕ್ಕೆ ಕೆ ಎನ್ ರಾಜಣ್ಣ ದಿಡೀರ್ ರಾಜೀನಾಮೆ ನೀಡಿದ್ದಾರೆ. ಇವತ್ತು ವಿಧಾನಸಭಾ ಕಲಾಪ ಸಲಹಾ ಸಮಿತಿ ಸಭೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರಿಗೆ ಕೆ. ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಚರ್ಚೆ ಇದೀಗ ರಾಜಕೀಯ ಅಂಗಳದಲ್ಲಿ ಪ್ರಾರಂಭವಾಗಿದೆ.
ಕೆಲ ದಿನಗಳ ಹಿಂದೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಸಂಬಂಧ ಲೋಕಸಭಾ ಚುನಾವಣೆ ಸಮಯ ಮತಕಳವು ನಡೆದಿದೆ ಎಂದು ಆರೋಪ ಮಾಡಿದ್ದರು, ಈ ಸಂದರ್ಭದಲ್ಲಿ ಕೆ. ಎನ್ ರಾಜಣ್ಣ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ದಪಡಿಸಿದ್ದು ಆಗ ಎಲ್ಲರೂ ಸುಮ್ಮನೆ ಕುಳಿತಿದ್ದರೇ ಎಂದು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ.