Categories
ಬೆಂಗಳೂರು

ಸರ್ಕಾರದ ಎಲ್ಲಾ ಬೋರ್ಡ್ ಕನ್ನಡ ಕಡ್ಡಾಯ

ಸರ್ಕಾರದ ಎಲ್ಲಾ ಬೋರ್ಡ್ ಕನ್ನಡ ಕಡ್ಡಾಯ
– ತೀರಾ ಅವಶ್ಯಕತೆ ಇದ್ರೆ ಮಾತ್ರ ಆಂಗ್ಲ ಬಳಕೆಗೆ ಅನುಮತಿ
– ಏನಿದು ಹೊಸ ಆದೇಶ? ಯಾಕೆ ಹೊಸ ಆದೇಶ?

NAMMUR EXPRESS NEWS
ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ.
ಆದುದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಸೂಚಿಸಿದೆ.
ೀರಾ ಅನಿವಾರ್ಯಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇಕಡ 60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇಕಡ 40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಈಗಾಗಲೇ ಅಂಗಡಿ, ಮಳಿಗೆ ಕನ್ನಡ ಬೋರ್ಡ್ ಕಡ್ಡಾಯ

ಈಗಾಗಲೇ ರಾಜ್ಯದಲ್ಲಿ ಅಂಗಡಿ ಮಳಿಗೆಗಳಲ್ಲಿ ಕನ್ನಡ ಬೋರ್ಡ್ ಕಡ್ಡಾಯಗೊಳಿಸಲಾಗಿದೆ. ಆದರೂ ಕೆಲವೆಡೆ ಇನ್ನು ಬೋರ್ಡ್ ಕಡ್ಡಾಯವಾಗಿ ಹಾಕಿಲ್ಲ ಎಂಬ ಆರೋಪ ಕೇಳಿ ಬಂದಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.