-ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಅಧ್ಯಕ್ಷರೇ?
-ಜನವರಿ 22ಕ್ಕೆ ನಿರ್ಧಾರ
ಬೆಂಗಳೂರು: ಹಾವೇರಿಯಲ್ಲಿ ಫೆ. 26ರಿಂದ 28ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕವಿ ಹಾಗೂ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.
ನಾಡೋಜ ಡಾ. ಮನು ಬಳಿಗಾರ್ ಅಧ್ಯಕ್ಷಾವಧಿಯಲ್ಲಿ ಈಗಾಗಲೇ ನಾಲ್ಕು ಬಾರಿ ಸಮ್ಮೇಳನ ನಡೆದಿದ್ದು, ಬ್ರಾಹ್ಮಣ, ಲಿಂಗಾಯತ ಸೇರಿದಂತೆ ಪ್ರಮುಖ ಸಮುದಾಯಗಳ ಮುಖಂಡರಿಗೆ ಆ ಸ್ಥಾನ ನೀಡಲಾಗಿದೆ. ಹೀಗಾಗಿ, ಈ ವರ್ಷ ಗೌಡ ಸಮುದಾಯಕ್ಕೆ ಆ ಪಟ್ಟ ಒಲಿಯಬೇಕಿದ್ದು, ಮುಂಚೂಣಿಯಲ್ಲಿ ದೊಡ್ಡರಂಗೇಗೌಡರ ಹೆಸರು ಕೇಳಿಬರುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಜ.22ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಅಂದು ಮಧ್ಯಾಹ್ನ ಕಸಾಪದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆಯನ್ನು ಸಮಿತಿ ಸಭೆಯಲ್ಲಿ ಅಂತಿಮಗೊಳಿಸಲಾಗುವುದು.