ಮಾ.22 ರಂದು ಕರ್ನಾಟಕ ಬಂದ್ ಫಿಕ್ಸ್!
– ಮಾ. 18(ಇಂದು) ನಡೆದ ಸಭೆಯಲ್ಲಿ ತೀರ್ಮಾನ!
– ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆ
NAMMUR EXPRESS NEWS
ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಪುಂಡರ ದಬ್ಬಾಳಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಇದೇ ಮಾರ್ಚ್ 22 ರಂದು ಅಂದರೆ ಶನಿವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದೆ.
ಈ ಸಂಬಂಧ ಮಾರ್ಚ್ 18 ಬೆಂಗಳೂರಿನಲ್ಲಿ ‘ಅಖಂಡ ಕರ್ನಾಟಕ ಬಂದ್’ ಕುರಿತು ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಯಿತು, ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಮಾಡಲು ತೀರ್ಮಾನಿಸಲಾಗಿದೆ.
ಕರ್ನಾಟಕ ಬಂದ್ ನಡೆಯುವುದು ಖಚಿತ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪುನರುಚ್ಚರಿಸಿದರು.
ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಎಲ್ಲ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲು ಮುಂದಾಗಿವೆ. ಮಾ. 18ರಂದು ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಿದ್ದು, ಮಾರ್ಚ್ 22 ರಂದು ಕನ್ನಡಪರ ಸಂಘಟನೆಗಳ ಹೋರಾಟ ನಡೆಸಲಾಗುವುದು, ಅಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್.
ಇತ್ತೀಚೆಗೆ ಬೆಳಗಾವಿಯಲ್ಲಿ ಸಾರಿಗೆ ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದರು. ಇದನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿದವು. ಜೊತೆಗೆ, ಮರಾಠಿ ಪುಂಡರು ಕರ್ನಾಟಕದ ಬಸ್‌ಗಳಿಗೆ ಹಾಗೂ ಕಂಡಕ್ಟರ್ ಮತ್ತು ಡ್ರೈವರ್‌ಗಳಿಗೆ ಮಸಿ ಬಳಿಯುತ್ತಿದ್ದರು, ಪುಂಡರ ವಿರುದ್ಧ ಸರಿಯಾದ ಕ್ರಮ ತೆಗೆದುಕೊಳ್ಳುವಂತೆ ಮತ್ತು ಇನ್ನು ಮುಂದೆ ಇಂತಹ ಘಟನೆಗಳು ಮರುಕುಳಿಸದಂತೆ ತಡೆಯುವ ಸರ್ಕಾರದ ಮೇಲೆ ಒತ್ತಡ ಏರಲು ಮಾರ್ಚ್ 22 ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ.
