Categories
ಬೆಂಗಳೂರು

ಮೇ 3ಕ್ಕೆ ಕರ್ನಾಟಕ ಎಸ್ಎಸ್​ಎಲ್​ಸಿ ಫಲಿತಾಂಶ ಪ್ರಕಟ ಸಾಧ್ಯತೆ!

ಮೇ 3ಕ್ಕೆ ಕರ್ನಾಟಕ ಎಸ್ಎಸ್​ಎಲ್​ಸಿ ಫಲಿತಾಂಶ ಪ್ರಕಟ ಸಾಧ್ಯತೆ!

– ಆನ್​ಲೈನ್​ನಲ್ಲಿ ಎಸ್‌ಎಸ್‌ಎಲ್‌ಸಿ ರಿಸಲ್ಟ್ ನೋಡುವುದು ಹೇಗೆ?
– ಇಲ್ಲಿದೆ ಸಂಪೂರ್ಣ ಮಾಹಿತಿ

NAMMUR EXPRESS NEWS
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಮೇ 3ರಂದು ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಸದ್ಯ ಪರೀಕ್ಷೆ ಬರೆದಿರುವ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿದ್ದವು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎನ್ನಲಾಗುತ್ತಿದೆ. ಕೆಲ ಸಣಪುಟ್ಟ ಕಾರ್ಯಗಳಿದ್ದು, ಕೂಡಲೇ ಮುಕ್ತಾಯಗೊಳಿಸಿ ಮೇ 3ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.
ರಾಜ್ಯದ 2818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದವು. ಪರೀಕ್ಷೆಗೆ 8 ಲಕ್ಷದ 96 ಸಾವಿರ ವಿದ್ಯಾರ್ಥಿಗಳು ನೊಂದಯಿಸಿಕೊಂಡಿದ್ದರು. ಇನ್ನೂ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಿ, ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಪರೀಕ್ಷಾ ದಿನದಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಉಚಿತ ಸೇವೆ ಕೂಡ ಕಲ್ಪಿಸಲಾಗಿತ್ತು.

ಎಸ್​ಎಸ್​​ಎಲ್​​ಸಿ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ನೋಡುವುದು ಹೇಗೆ?

ಅಧಿಕೃತ ವೆಬ್‌ಸೈಟ್​ಗಳಾದ https://karresults.nic.in/ ಮತ್ತು kseab.karnataka.gov.in ಭೇಟಿ ನೀಡಿ.
ಮುಖಪುಟದಲ್ಲಿರುವ ‘SSLC ಫಲಿತಾಂಶ 2025’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್​ಮೀಟ್​ ಮೇಲೆ ಕ್ಲಿಕ್ ಮಾಡಬೇಕು.
ಬಳಿಕ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನಗೊಳ್ಳುತ್ತದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಆಫ್‌ ಲೈನ್‌ನಲ್ಲಿ ಫಲಿತಾಂಶವನ್ನು ನೋಡಲು ಬಯಸುವವರು ತಮ್ಮ ನೋಂದಣಿ ಸಂಖ್ಯೆಯೊಂದಿಗೆ 56263ಗೆ ಎಸ್​ಎಂಎಸ್​ ಕಳುಹಿಸುವ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.