ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಶಾಕ್!
– ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್ಗೆ ಅರ್ಜಿ
– ಗ್ಯಾರಂಟಿ ಕಾರ್ಡ್ ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಆರೋಪ
– ರಾಹುಲ್ ಗಾಂಧಿ ಕೇಸ್: ವಿಚಾರಣೆ ಆ.4ಕ್ಕೆ ಮುಂದೂಡಿಕೆ
NAMMUR EXPRESS NEWS
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ನೆರವಾಗಿದ್ದವು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಐದು ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ತಮ್ಮತ್ತ ಸೆಳೆದಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್ಗಳನ್ನು ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು. ಅದರಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.
ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ :
ವಿಚಾರಣೆ ಆ.4 ಕ್ಕೆ ಮುಂದೂಡಿಕೆ ಪೂರ್ಣೇಶ್ ಮೋದಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಮೋದಿ ಉಪನಾಮ ಟೀಕೆ ಪ್ರಕರಣದಲ್ಲಿ ತನಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆಯನ್ನು ತಡೆಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜು. 21 ರಂದು ಕೈಗೆತ್ತಿಕೊಂಡಿದೆ.
ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ನ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿದೆ. ರಾಹುಲ್ ಗಾಂಧಿ ಮನವಿ ಮೇರೆಗೆ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸೇರಿ ಇತರರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಯನ್ನು ಆ.4ಕ್ಕೆ ಮುಂದೂಡಿದೆ.
ಇದನ್ನೂ ಓದಿ : ಕರಾವಳಿಯಲ್ಲಿ ಕೊರಗಜ್ಜನ ಪವಾಡ.!
HOW TO APPLY : NEET-UG COUNSELLING 2023