- ಹೆಚ್ಚುಜನ ಸೇರಿದರೆ ಆಯೋಜಕರ ಮೇಲೆ ಕೇಸ್
ಬೆಂಗಳೂರು: ಚಳಿ ಹೆಚ್ಚಾದಂತೆ ಮತ್ತೆ ಕರೋನಾ ಹಾವಳಿ ಹೆಚ್ಚಾಗುತ್ತಿದೆ. ಈ ನಡುವೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಲಾಕ್ ಡೌನ್ ಶುರುವಾಗಿದೆ. ಇನ್ನು ಗುಜರಾತ್ ರಾಜಧಾನಿ ಅಹಮದಾಬಾದ್ನಲ್ಲಿ ರಾತ್ರಿ ಕಪ್ರ್ಯೂ ಜಾರಿಗೊಳಿಸಲಾಗಿದೆ. ಈ ಮುಳಕ ಕರೋನಾ ಮತ್ತೊಂದು ಮುಖ ಅನಾವರಣಗೊಳ್ಳುತ್ತಿದೆ.
ಮತ್ತೆ ನಿಯಮ ಜಾರಿ?: ಜನ ಕರೋನಾ ಭಯ ಬಿಟ್ಟು ಸಹಜ ಬದುಕಿಗೆ ಮರಳುತ್ತಿದ್ದಾರೆ. ಬದುಕಿನ ಬಂಡಿ ಎಳೆಯಲು ಸಿದ್ಧರಾಗಿದ್ದಾರೆ. ಈ ನಡುವೆ ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸರಿಂಗ್ ಮರೆತಿದ್ದಾರೆ. ಇದೇ ಕರೋನಾ ಹೆಚ್ಚಳಕ್ಕೂ ಕಾರಣವಾಗಿದೆ. ಇತ್ತ ಹಾಸನ ಜಿಲ್ಲೆಯಲ್ಲಿ ಮದುವೆ ಸಮಾರಂಭಗಳಲ್ಲಿ 200ಕ್ಕೂ ಹೆಚ್ಚು ಮಂದಿ ಸೇರುವಂತಿಲ್ಲ” ಎಂದು ಶುಕ್ರವಾರ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಕಲ್ಯಾಣ ಮಂಟಪ ಹಾಗೂ ಹೋಟೆಲ್ಗಳಲ್ಲಿ ವಿವಾಹ ಹಾಗೂ ಇತರೆ ಕಾರ್ಯಕ್ರಮಗಳಲ್ಲಿ 200ಕ್ಕೂ ಹೆಚ್ಚು ಮಂದಿ ಸೇರುತ್ತಿರುವುದು ಗಮನಕ್ಕೆ ಬಂದಿದೆ. ಹೆಚ್ಚು ಜನರು ಸೇರುವ ಯಾವುದೇ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಮತ್ತು ಕೈ ತೊಳೆಯುವುದು ಕಡ್ಡಾಯವಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡದಿರುವುದು ಕಂಡುಬಂದಲ್ಲಿ ಅಂತಹ ಹೋಟೆಲ್ ಅಥವಾ ಕಲ್ಯಾಣ ಮಂಟಪದ ಮಾಲೀಕರ ಮೇಲೆ ಹಾಗೂ ಕಾರ್ಯಕ್ರಮದ ಆಯೋಜಕರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡೀಸಿ ಹೇಳಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದರೆ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದೂ ತಿಳಿಸಿದ್ದಾರೆ. ಈ ಮೂಲಕ ಎಲ್ಲಾ ಜಿಲ್ಲೆಗಳಲ್ಲಿ ಕಾನೂನು ಜಾರಿಯಾಗುವ ಸಾಧ್ಯತೆಗಳಿವೆ.