Categories
ಬೆಂಗಳೂರು

ಕಾಂಗ್ರೆಸ್ ಕೈಗೆ ಬಿಜೆಪಿಯ ಪ್ರಮುಖ ನಾಯಕರು?!

ಕಾಂಗ್ರೆಸ್ ಕೈಗೆ ಬಿಜೆಪಿಯ ಪ್ರಮುಖ ನಾಯಕರು?!
– ರಾಜ್ಯದಲ್ಲಿ ಆಪರೇಷನ್ ಹಸ್ತ ಚುರುಕು
– ರೇಣುಕಾಚಾರ್ಯ ಸೇರಿ ಅನೇಕ ಬಿಜೆಪಿ ನಾಯಕರಿಗೆ ಗಾಳ!

NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಆಪರೇಷನ್ ಹಸ್ತ ಮುಂದುವರಿಯುತ್ತಿದೆ. ಅನೇಕ ನಾಯಕರು ಈಗಾಗಲೇ ಬಿಜೆಪಿ, ಜೆಡಿಎಸ್, ಆಮ್ ಆದ್ಮಿ ಪಕ್ಷದಿಂದ ಕಾಂಗ್ರೆಸ್ ಕಡೆ ಬರುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಹಂತ ಹಂತವಾಗಿ ಎಲ್ಲಾ ಜಿಲ್ಲೆಗಳ ವಿವಿಧ ಪಕ್ಷಗಳ ನಾಯಕರನ್ನು ಕಾಂಗ್ರೆಸ್‌ಗೆ ಸೆಳೆಯುವ ಕಾರ್ಯಾಚರಣೆಗಳು ತೀವ್ರಗೊಂಡಿವೆ. ಮಧ್ಯ ಕರ್ನಾಟಕ ಭಾಗದ ಮೂವರು ಮಾಜಿ ಶಾಸಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಮಾತುಕತೆ ಮುಂದುವರೆದಿದೆ. ಶಿವಮೊಗ್ಗ ಬಳಿಕ ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕ ಸೇರಿದಂತೆ ಪ್ರತಿ ಜಿಲ್ಲೆಯಲ್ಲಿ ಕಾಂಗ್ರೆಸ್ ಕಡೆಗೆ ಅನೇಕ ನಾಯಕರನ್ನು ಸೆಳೆಯಲಾಗುತ್ತಿದೆ.

ದಾವಣಗೆರೆಯಲ್ಲಿ ಅನೇಕರು ಕಾಂಗ್ರೆಸ್ ಕಡೆಗೆ!

ಮಧ್ಯ ಕರ್ನಾಟಕ ಭಾಗದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಹಠಕ್ಕೆ ಬಿದ್ದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೊನ್ನಾಳಿಯ ಎಂ.ಪಿ.ರೇಣುಕಾಚಾರ್ಯ, ಚೆನ್ನಗಿರಿ ಮಾಡಾಳ್ ವಿರುಪಾಕ್ಷಪ್ಪ, ಜಗಳೂರು ಕ್ಷೇತ್ರದ ಗುರುಸಿದ್ದನಗೌಡರೊಂದಿಗೆ ಮಾತುಕತೆ ನಡೆಸಿದ್ದಾರೆ. ದಾವಣಗೆರೆಯಲ್ಲಿ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಪ್ರಾಬಲ್ಯವಿದ್ದರೂ ಹಲವಾರು ಬಾರಿ ಬಿಜೆಪಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿದೆ. ಈ ಅವಧಿಯಲ್ಲಿ ಈ ಫಲಿತಾಂಶ ಬದಲಾವಣೆ ಮಾಡಬೇಕೆಂದು ಹಠಕ್ಕೆ ಬಿದ್ದಿರುವ ರಾಜ್ಯದ ಕಾಂಗ್ರೆಸಿಗರು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯಿತ ಸಮುದಾಯ ಕಾಂಗ್ರೆಸ್ ಪಕ್ಷದ ಕೈ ಹಿಡಿದಿದೆ. ಈ ಲಿಂಗಾಯಿತ ಸಮುದಾಯದ ಪ್ರಮುಖ ನಾಯಕರನ್ನು ಸೆಳೆಯುವ ಮೂಲಕ ಲೋಕಸಭೆ ಚುನಾವಣೆಯಲ್ಲೂ ಗೆಲ್ಲುವ ಯಾತ್ರೆಯನ್ನು ಕಾಂಗ್ರೆಸ್ ನಿರ್ಧರಿಸಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.