ಆರೋಗ್ಯ ಸಿಬ್ಬಂದಿಗೆ ಮತ್ತೆ ಮಾಸ್ಕ್ ಕಡ್ಡಾಯ!
– ಸನ್ನದ್ಧ ಸ್ಥಿತಿಗೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ಸೂಚನೆ
– ಮತ್ತೆ ಶುರುವಾಗಿದೆ ಚೀನಾ ವೈರಸ್ ಭಯ
NAMMUR EXPRESS NEWS
ಬೆಂಗಳೂರು: ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯೂಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅರೋಗ್ಯ ಇಲಾಖೆಯ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಆಧರಿಸಿ ಆರೋಗ್ಯ ಮತ್ತು ಕುಟುಂಬ ಇಲಾಖೆ ಆದೇಶ ಹೊರಡಿಸಿದ್ದಾರೆ.
ಜನರು ವಹಿಸಬೇಕಾದ ಎಚ್ಚರಿಕೆ ಏನು?
– ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರದಿಂದ ಬಾಯಿ, ಮೂಗು ಮುಚ್ಚಿಕೊಳ್ಳುವುದು.
– ಆಗಾಗ ಸೋಪಿನಿಂದ ಕೈ ತೊಳೆದುಕೊಳ್ಳುವುದು
– ಶೀತ ಮತ್ತು ಜ್ವರ ಐದರಿಂದ ಏಳು ದಿನಗಳು ಇರಲಿವೆ
– ಎಳೆ ಮಕ್ಕಳು, ವೃದ್ಧರು, ಗರ್ಭಿಣಿಯರು, ಗಂಭೀರ ಸ್ವರೂಪದ ಅನಾರೋಗ್ಯ ಸಮಸ್ಯೆ ಇರುವವರು ಎಚ್ಚರಿಕೆಯಿಂದ ಇರುವುದು
– ಶೀತ ಜ್ವರ ಭಾದೆ ಇದ್ದರೆ ಹತ್ತಿರ ಸರ್ಕಾರಿ ಆಸ್ಪತ್ರೆಯಲ್ಲಿ ತೋರಿಸಿಕೊಳ್ಳುವುದು.