ನೀರಜ್ ಚೋಪ್ರಾಗೆ ಬೆಳ್ಳಿ, ಹಾಕಿಯಲ್ಲಿ ಕಂಚು ಸಂಭ್ರಮ!
– ಭಾರತದ ಚಿನ್ನದ ಪದಕದ ಆಸೆ ಈಡೇರಲಿಲ್ಲ
– ಭಾರತಕ್ಕೆ ಐದನೇ ಪದಕ ತಂದುಕೊಟ್ಟ ಚೋಪ್ರಾ
NAMMUR EXPRESS NEWS
ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ನ ಭಾರತದ ಸ್ಟಾರ್ ಜಾವೆಲಿನ್
ಎಸೆತದಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ಪ್ರತಿಸ್ಪರ್ಧಿ ಹಾಗೂ ನೆರೆಯ ಪಾಕಿಸ್ತಾನದ ಅರ್ಷದ್ ನದೀಮ್ ಒಲಿಂಪಿಕ್ಸ್ ದಾಖಲೆಯ 92.97 ಮೀಟರ್ ಎಸೆಯುವ ಮೂಲಕ ಬಂಗಾರ ಗೆದ್ದರು. ಹೀಗಾಗಿ ನೀರಜ್ ಚೋಪ್ರಾ ಅವರಿಗೆ ಬೆಳ್ಳಿಯ ಪದಕ ಲಭಿಸಿತು. ಅವರು 89.45 ದೂರ ಎಸೆಯುವ ಮೂಲಕ ಭಾರತಕ್ಕೊಂದು ಪದಕವನ್ನು ತಂದುಕೊಟ್ಟರು. ಇದು ಭಾರತದ ಪಾಲಿಗೆ ಹಾಲಿ ಆವೃತ್ತಿಯ ಒಲಿಂಪಿಕ್ಸ್ನಲ್ಲಿ ಐದನೇ ಪದಕ. ನೀರಜ್ ತಂದ ಬೆಳ್ಳಿಯೇ ಅದರಲ್ಲಿ ಗರಿಷ್ಠ ಪದಕವಾಗಿದೆ. ಆದಾಗ್ಯೂ ನೀರಜ್ ಚಿನ್ನ ಗೆಲ್ಲುತ್ತಾರೆಂಬ ಭಾರತದ ಕೋಟ್ಯಂತರ ಕ್ರೀಡಾಭಿಮಾನಿಗಳ ನಿರೀಕ್ಷೆ ಹುಸಿಯಾಯಿತು.
ನೀರಜ್ ಚೋಪ್ರಾ ಅವರ ಮೊದಲ ಎಸೆತವೇ ಪೌಲ್. ನಂತರದ ಎಸೆತದಲ್ಲಿ 89.45 ಮೀಟರ್ ದೂರ ಎಸೆದರು. ಅಲ್ಲದೆ ಆ ಬಳಿಕದ ನಾಲ್ಕು ಎಸೆತಗಳು ಪೌಲ್ ಆದವು. ತಮ್ಮ ಎಸೆತಗಳು ನಿರೀಕ್ಷೆಯಷ್ಟು ದೂರ ಹೋಗದ ಕಾರಣ ನಂತರದ ಮೂರು ಬಾರಿ ಅವರು ಅಂತಿಮ ಲೈನ್ ಮೆಟ್ಟಿ ಸ್ವತಃ ಪೌಲ್ ಮಾಡಿದರು. ಅರ್ಷದ್ 92. ಮೀಟರ್ಗಿಂತಲೂ ದೂರ ಎಸೆದ ತಕ್ಷಣವೇ ಒತ್ತಡಕ್ಕೆ ಬಿದ್ದ ನೀರಜ್ಗೆ ಚೇತರಿಸಿಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಆದರೆ, ಅರ್ಷದ್ ತಮ್ಮ ಕೊನೇ ಎಸೆತವನ್ನೂ 91. 79 ಮೀಟರ್ ದೂರ ಎಸೆದರು. ಅಂದ ಹಾಗೆ ಪಾಕಿಸ್ತಾನಕ್ಕೆ 32 ವರ್ಷಗಳ ಬಳಿಕ ಒಲಿಂಪಿಕ್ಸ್ನಲ್ಲಿ ಪದಕವೊಂದು ದೊರಕಿತು.
2021ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಗೆದ್ದ ಚಿನ್ನದ ಪದಕ ಉಳಿಸಿಕೊಳ್ಳುವುಕ್ಕೆ 26 ವರ್ಷದ ನೀರಜ್ಗೆ ಸಾಧ್ಯವಾಗಲಿಲ್ಲ. ಒಲಿಂಪಿಕ್ಸ್ನಲ್ಲಿ ಮತ್ತೊಂದು ಚಿನ್ನ ಗೆಲ್ಲುವ ಅವಕಾಶ ಅವರಿಗೆ ತಪ್ಪಿತು. ಮಂಗಳವಾರ ನಡೆದ ಅರ್ಹತಾ ಸ್ಪರ್ಧೆಯಲ್ಲಿ ನೀರಜ್ 89.34 ಮೀಟರ್ ಎಸೆಯುವ ಮೂಲಕ ನೇರವಾಗಿ ಅರ್ಹತೆ ಪಡೆದಿದ್ದರು. ಆಗಸ್ಟ್ 7, 2021ರಂದು, ನೀರಜ್ ಚೋಪ್ರಾ ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಫೈನಲ್ನಲ್ಲಿ ಅವರ ಎರಡನೇ ಎಸೆತವು 87.58 ಮೀಟರ್ ದೂರ ಹೋಗಿತ್ತು. ಅದರ ಮೂಲಕ ಅವರು ಚಿನ್ನ ಗೆದ್ದಿದ್ದರು.
ಭಾರತ ಹಾಕಿ ತಂಡ ಸ್ಪೇನ್ ದೇಶದ ವಿರುದ್ಧ ಗೆಲುವು
ಭಾರತ ಒಲಂಪಿಕ್ಸ್ ಅಲ್ಲಿ ಮತ್ತೊಂದು ಪದಕ ಗೆದ್ದಿದೆ. ಹಾಕಿಯಲ್ಲಿ ಕಂಚಿನ ಪದಕ ಗೆದ್ದಿದೆ.
ಸ್ಪೇನ್ನನ್ನು 2-1 ಗೋಲುಗಳಿಂದ ಮಣಿಸಿದ ಭಾರತ ತಂಡವು ಕಂಚಿನ ಪದಕ ಗೆದ್ದಿದೆ. 2020ರ ಟೋಕಿಯೋ ಒಲಿಂಪಿಕ್ಸ್ನಲ್ಲೂ ಭಾರತ ಪುರುಷರ ಹಾಕಿ ತಂಡ ಕಂಚು ಗೆದ್ದಿತ್ತು. ಕಂಚಿನ ಹೋರಾಟದಲ್ಲಿ ಸ್ಪೇನ್ ವಿರುದ್ಧ 2-1 ಅಂತರ ಗೋಲುಗಳ ಜಯ ದಾಖಲಿಸಿದೆ. ಭಾರತದ ಪರ ತನ್ನ ಅಂತಿಮ ಪಂದ್ಯವನ್ನು ಆಡಿದ ಅನುಭವಿ ಗೋಲ್ಕೀಪರ್ ಪಿ.ಆರ್.ಶ್ರೀಜೇಶ್ ಉತ್ತಮ ಪ್ರದರ್ಶನ ತೋರಿದರು.
1968 ಮತ್ತು 1972 ರಲ್ಲಿ ಭಾರತವು ಕೊನೆಯ ಬಾರಿಗೆ ಒಲಿಂಪಿಕ್ಸ್ನಲ್ಲಿ ಹಾಕಿ ಪದಕಗಳನ್ನು ಗೆದ್ದಿತ್ತು. ಅದಾದ 52 ವರ್ಷಗಳ ಬಳಿಕ ಈಗ ಮತ್ತೊಮ್ಮೆ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದು ಇತಿಹಾಸ ಬರೆದಿದೆ.