ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್!
– ಗೃಹಲಕ್ಷ್ಮೀ ನೋಂದಣಿಗೆ ಎಸ್.ಎಂ.ಎಸ್ ಕಾಯಬೇಕಾಗಿಲ್ಲ
– ಎಸ್ಎಂಎಸ್ ಇಲ್ಲದೇ ನೋಂದಣಿ ಮಾಡಲು ಅವಕಾಶ
NAMMUR EXPRESS NEWS
ಬೆಂಗಳೂರು: ಸರ್ಕಾರ ಪ್ರತೀ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಕಾರ್ಯ ಈಗಾಗಲೇ ಆರಂಭಗೊಂಡಿದೆ. ಯೋಜನೆಗೆ ಅರ್ಜಿ ಸಲ್ಲಿಸುವ ಫಲಾನುಭವಿಗಳು ಇಷ್ಟು ದಿನ ಎಸ್ಎಂಎಸ್ಗಾಗಿ ಕಾಯಬೇಕಾಗಿತ್ತು. ಆದರೆ ರಾಜ್ಯ ಸರಕಾರ ಹೊಸ ರೂಲ್ಸ್ ಜಾರಿಗೆ ತಂದಿದ್ದು, ಎಸ್ಎಂಎಸ್ ಇಲ್ಲದೇ ನೋಂದಣಿ ಮಾಡಲು ಅವಕಾಶ ಕಲ್ಪಿಸಿದೆ. ಗೃಹಲಕ್ಷ್ಮೀ ಯೋಜನೆ ರಾಜ್ಯದಲ್ಲಿ ಈಗಾಗಲೇ ಜಾರಿಗೆ ಬಂದಿದೆ. ರೇಷನ್ ಕಾರ್ಡ್ನಲ್ಲಿ ಮನೆಯೊಡತಿ ಎಂದು ನಮೂದಾಗಿರುವ ಮಹಿಳೆಯ ಬ್ಯಾಂಕ್ ಖಾತೆಗೆ ರಾಜ್ಯ ಸರಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ 2000 ರೂಪಾಯಿ ಹಣವನ್ನು ನೇರವಾಗಿ ವರ್ಗಾವಣೆ ಮಾಡಲಿದೆ. ಇಷ್ಟು ದಿನ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಬಂದ ನಂತರವಷ್ಟೇ ಯೋಜನೆಗೆ ನೋಂದಣಿ ಮಾಡಲು ಅವಕಾಶವಿತ್ತು.
ಆದ್ರೀಗ ಹೊಸ ನಿಯಮದ ಪ್ರಕಾರ ಎಲ್ಲರೂ ನೇರವಾಗಿ ತಮಗೆ ಹತ್ತಿರ ಇರುವ ಗ್ರಾಮ ಒನ್, ಗ್ರಾಮ ಪಂಚಾಯತ್ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ನಗರದ ವಾರ್ಡ್ ಕಚೇರಿಗಳಲ್ಲಿ ಯೋಜನೆಗೆ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬಹುದು.
ಇದನ್ನೂ ಓದಿ : ಖಾಸಗಿ ಚಾನಲ್ ವಿರುದ್ದ ಕಿಮ್ಮನೆ 5 ಕೋಟಿ ಕೇಸ್!?
HOW TO APPLY : NEET-UG COUNSELLING 2023