Categories
ಬೆಂಗಳೂರು

ಮೇ 29ರಿಂದ ಶಾಲೆಗಳ ಪುನರಾರಂಭಕ್ಕೆ ಸೂಚನೆ

ಮೇ 29ರಿಂದ ಶಾಲೆಗಳ ಪುನರಾರಂಭಕ್ಕೆ ಸೂಚನೆ
– ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇದು ಅನ್ವಯ

ಏ.15 ರಿಂದ 17 ವರೆಗೆ ಸಿಇಟಿ ಪರೀಕ್ಷೆ
– ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ

NAMMUR EXPRESS NEWS
ಬೆಂಗಳೂರು: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯು 2025- 26ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದ್ದು ಮೇ 29ರಿಂದ ಶಾಲೆಗಳನ್ನು ಆರಂಭಿಸಲು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇದು ಅನ್ವಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮೇ 29 ರಿಂದ ಸೆಪ್ಟೆಂಬರ್ 19 ರವರೆಗೆ ಮೊದಲ ಅವಧಿ ಹಾಗೂ ಅಕ್ಟೋಬರ್ 8 ರಿಂದ 2026 ರ ಏಪ್ರಿಲ್ 10 ರವರೆಗೆ ಎರಡನೇ ಅವಧಿಯಲ್ಲಿ ಶಾಲೆಗಳು ಕರ್ತವ್ಯ ನಿರ್ವಹಿಸಲಿವೆ. ಸೆ.20 ರಿಂದ ಅ.7 ರವರೆಗೆ ದಸರಾ ರಜೆ ಮತ್ತು 2026ರ ಏಪ್ರಿಲ್ 11 ರಿಂದ ಮೇ 28 ರವರೆಗೆ ಬೇಸಿಗೆ ರಜೆ ಇರಲಿದೆ. ಕರ್ತವ್ಯದ ದಿನಗಳು 242: ಪ್ರಸಕ್ತ ಸಾಲಿನಲ್ಲಿ 123 ದಿನಗಳು ರಜೆಯ ದಿನಗಳಾಗಿರುತ್ತವೆ. ಉಳಿದ 242 ದಿನಗಳು ಶಾಲೆ ನಡೆಯಲಿವೆ. 242 ದಿನಗಳಲ್ಲಿ ಪರೀಕ್ಷೆ ಮತ್ತು ಮೌಲ್ಯಾಂಕನ ಕಾರ್ಯಕ್ಕಾಗಿ 26 ದಿನಗಳನ್ನು ನಿಗದಿಮಾಡಲಾಗಿದೆ. ಪತ್ಯೇತರ ಚಟುವಟಿಕೆ, ಪಠ್ಯ ಚಟುವಟಿಕೆ, ಸ್ಪರ್ಧೆಗಳ ನಿರ್ವಹಣಾ ಕಾರ್ಯಕ್ಕಾಗಿ 22 ದಿನ ನಿಗದಿಪಡಿಸಲಾಗಿದೆ. ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕೆ 10 ದಿನ, ಶಾಲಾ ಸ್ಥಳೀಯ ರಜೆಗಳಿಗೆ 04 ದಿನ ಮತ್ತು ಬೋಧನಾ ಕಲಿಕಾ ಪ್ರಕ್ರಿಯೆಗೆ ಉಳಿಯುವ ಕರ್ತವ್ಯಕ್ಕೆ 178 ದಿನಗಳನ್ನು ಮೀಸಲಿಡಲಾಗಿದೆ.

ಏ.15 ರಿಂದ 17 ವರೆಗೆ ಸಿಇಟಿ ಪರೀಕ್ಷೆ
– ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025ರ ಸಾಮಾನ್ಯ ಪ್ರವೇಶ ಪರೀಕ್ಷಾ ದಿನಾಂಕ ಪ್ರಕಟಿಸಿದ್ದು, ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದರು. ಏ. 15 ರಿಂದ 17ವರೆಗೆ ಸಿಇಟಿ ಪರೀಕ್ಷೆ ನಡೆಯಲಿದ್ದು, ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏ.15ಕ್ಕೆ ಹಿಂದೂಡಿಕೆ ಆಗಿದೆ. ಅಂದರೆ ಈ ಹಿಂದೆ ಪರೀಕ್ಷೆಯನ್ನು ಏ.18 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಏ.18, ಶುಕ್ರವಾರ ಕ್ರಿಶ್ಚಿಯನ್ ಧಾರ್ಮಿಕ ಹಬ್ಬವಾದ ಗುಡ್ ಪ್ರೈಡೇ ಇರುವುದರಿಂದ ಸರಕಾರ ಪರೀಕ್ಷೆ ದಿನಾಂಕವನ್ನು ಬದಲಿಸಿದೆ. ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆಸುವ ಸಿಇಟಿ ಪರೀಕ್ಷೆಗೆ ಜನವರಿ 23 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿತ್ತು. ಈ ವರ್ಷ 3 ಲಕ್ಷ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುವ ನೀರಿಕ್ಷೆಯಿದೆ ಎಂದು ಮಾಹಿತಿ ನೀಡಿದ್ದಾರೆ.

ಏ.15ರಂದು ಕನ್ನಡ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಮತ್ತು ಕೆಇಎ ನಡೆಸಿದ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ವಿನಾಯಿತಿ ಇರುತ್ತದೆ. ಏ.16 ರಂದು 10:30 ರಿಂದ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2:30 ರಿಂದ ರಾಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಮರುದಿನ ಅಂದರೆ ಏ.17 ರಂದು ಬೆಳಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ತೆಗೆದುಕೊಳ್ಳುವ ಅಭ್ಯರ್ಥಿ ಗಳು ತಮ್ಮ ದಾಖಲೆಗಳನ್ನು ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ತಮ್ಮ ಕಾಲೇಜುಗಳಲ್ಲಿ ಪರಿಶೀಲಿಸಿಕೊಳ್ಳಲು ಅವಕಾಶ ಇರುತ್ತದೆ. ಈ ವಿಷಯದಲ್ಲಿ ಆತಂಕಪಡುವ ಅಗತ್ಯ ಇಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.