Categories
ಬೆಂಗಳೂರು

ಈಗ ಮಳೆ ಜತೆ ಚಳಿ ಚಳಿ..!

ಈಗ ಮಳೆ ಜತೆ ಚಳಿ ಚಳಿ..!
– ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ
– ಮಲೆನಾಡು, ಕರಾವಳಿಗೆ ಮಳೆ ಅಲರ್ಟ್

NAMMUR EXPRESS NEWS
ಬೆಂಗಳೂರು: ಕೊಂಚ ದಿನ ತಗ್ಗಿದ್ದ ಮಳೆ ಮತ್ತೆ ಚುರುಕಾಗಿ, ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ. ಅಲ್ಲದೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ಇರುವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಒಂದು ವಾರ ನೈಋುತ್ಯ ಮಾನ್ಸೂನ್‌ ಚುರುಕಾಗಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಬೆಳಗಾವಿ ,ಬೀದರ್, ಕಲಬುರ್ಗಿ, ವಿಜಯಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 20 ರವರೆಗೂ ಭಾರಿ ಮಳೆ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೆ ಯೆಲ್ಲೋ ಅಲರ್ಟ್ ಇದ್ದು, ನಂತರ ಮಳೆಯ ತೀವ್ರತೆ ಹೆಚ್ಚಾಗುವ ಮುನ್ಸೂಚನೆ ಇದ್ದು, ಆಗಸ್ಟ್ 18, 19 ಹಾಗೂ 20 ರಂದು ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್ ಕೊಡಲಾಗಿದೆ. ಆಗಸ್ಟ್ 14 ಹಾಗೂ 15 ರಂದು ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗುವ ಅಲರ್ಟ್ ಕೊಡಲಾಗಿದೆ. ಬುಧವಾರ ಕಲಬುರಗಿ ಜಿಲ್ಲೆಯ ಆಳಂದ, ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ತಲಾ 5 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಮಂಕಿ, ಉಡುಪಿ ಜಿಲ್ಲೆಯ ಕುಂದಾಪುರ, ದಕ್ಷಿಣ ಕನ್ನಡ ಜಿಲ್ಲೆಯ ಶಕ್ತಿ ನಗರ, ಯಾದಗಿರಿ ಜಿಲ್ಲೆಯ ಕುಕ್ಕೇರಿ, ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.