- ಚುನಾವಣಾ ಆಯೋಗಕ್ಕೆ ಜೆಡಿಎಸ್ ಪಕ್ಷದ ದೂರು
- ಪಕ್ಷಾಪಾತಿ ಅಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ
NAMMUR EXPRESS NEWS
ಬೆಂಗಳೂರು : ಚುನಾವಣೆ ಸಂದರ್ಭದಲ್ಲಿ ಕೆಲ ಅಧಿಕಾರಿಗಳು ಕೆಲ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು ನೀಡಿದೆ.
ಚುನಾವಣೆ ಸಂದರ್ಭದಲ್ಲಿ ಕೆಲ ಅಧಿಕಾರಿಗಳು ಕೆಲ ಪಕ್ಷದ ಪರವಾಗಿ ಕೆಲಸ ಮಾಡ್ತಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು ನೀಡಿದ್ದು, ಈ ಬಗ್ಗೆ ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ ಹೇಳಿಕೆ ನೀಡಿದ್ದಾರೆ. ಚುನಾವಣೆ ಸಮಯದಲ್ಲಿ ಕೆಲ ಅಧಿಕಾರಿಗಳು ಕೆಲ ಪಕ್ಷದ ಪರವಾಗಿ ಕೆಲಸ ಮಾಡ್ತಿದ್ದಾರೆ. ಹಾಗಾಗಿ ಅಂತಹ ಅಧಿಕಾರಿಗಳನ್ನ ವರ್ಗಾವಣೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ ಜೊತೆಗೂಡಿ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ ಯವರು ಚುನಾವಣಾಧಿಕಾರಿಗಳು, ತಹಶೀಲ್ದಾರ್, ಪೊಲೀಸ್ ಸೇರಿದಂತೆ, ಕೆಲ ಉನ್ನತ ಅಧಿಕಾರಿಗಳ ಬದಲಾವಣೆಗೆ ತಿಪ್ಪೇಸ್ವಾಮಿ ಮನವಿ ಮಾಡಿದ್ದಾರೆ, ಈಗಾಗಲೇ ಕೆಲ ಅಧಿಕಾರಿಗಳ ಬದಲಾವಣೆ ಮಾಡಲಾಗಿದೆ ಹಾಗೂ ಇನ್ನೂ ಕೆಲವು ಅಧಿಕಾರಿಗಳ ಬದಲಾವಣೆ ಆಗಬೇಕಾಗಿದೆ. ಯಶವಂತಪುರ, ಶಿವಮೊಗ್ಗ ಗ್ರಾಮಾಂತರ, ಹಾಸನ, ಕುಣಿಗಲ್, ನಾಗಮಂಗಲ ಸೇರಿದಂತೆ ಕೆಲವೆಡೆ ಬದಲಾವಣೆ ಮಾಡುವಂತೆ ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ ಮನವಿ ಮಾಡಿದ್ದಾರೆ.