ಅಯ್ಯೋ ದೇವ್ರೇ…ಮುಗಿಯಲಿಲ್ಲ ಮಳೆ ಆರ್ಭಟ!
– 7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ
– ರಾಜ್ಯದಲ್ಲಿ ಮುಂದುವರಿದ ಮಳೆ ಹಾನಿ
– ಮಲೆನಾಡು -ಕರಾವಳಿಯಲ್ಲಿ ಮಳೆ ಡೇಂಜರ್
NAMMUR EXPRESS NEWS
ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಎಲ್ಲೆಡೆ ಹಾನಿ ಮುಂದುವರಿದಿದೆ. ಈ ನಡುವೆ ರಾಜ್ಯದಲ್ಲಿ ಇನ್ನು ಒಂದು ವಾರ ಮಳೆ ಆರ್ಭಟ ಇದೆ.
ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಸುತ್ತಮುತ್ತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮೈಸೂರು, ಮಂಡ್ಯ ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಮಧ್ಯಮ ಮಳೆಯಾಗಲಿದ್ದು ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ. ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲೂ ಸಾಧಾರಣ ಮಳೆ”
ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಇದು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ. ರಾತ್ರಿ ಸಮಯ ಚಳಿ ಹೆಚ್ಚಾಗಲಿದೆ.
7 ಜಿಲ್ಲೆಗಳಿಗೆ ಮುನ್ನೆಚ್ಚರಿಕೆ!
ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ & ಶಿವಮೊಗ್ಗ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.