Categories
ಬೆಂಗಳೂರು

ಪಾಕಿಸ್ತಾನದ ವಿರುದ್ಧದ ‘ಆಪರೇಷನ್ ಸಿಂಧೂರ್’

ಪಾಕಿಸ್ತಾನದ ವಿರುದ್ಧದ ‘ಆಪರೇಷನ್ ಸಿಂಧೂರ್’
– ರಾಜ್ಯದಲ್ಲಿ ವಿಮಾನ ನಿಲ್ದಾಣ ಹಾಗೂ ಡ್ಯಾಂಗಳಿಗೆ ಹೆಚ್ಚಿನ ಭದ್ರತೆ
– ಕೇಂದ್ರದ ಗುಪ್ತಚರ ಇಲಾಖೆಯ ಜೊತೆಗೆ ಸಂಪರ್ಕ

NAMMUR EXPRESS NEWS
ಬೆಂಗಳೂರು: ಪಾಕಿಸ್ತಾನದ ವಿರುದ್ಧ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ವಿಮಾನ ನಿಲ್ದಾಣ ಹಾಗೂ ಡ್ಯಾಂಗಳಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಗೆ ಹೆಮ್ಮೆ ಇದೆ. ದೇಶದ ಹಿತಕ್ಕೆ ನಾವೆಲ್ಲ ಒಂದಾಗಿರುತ್ತೇವೆ ಎಂದು ಹೇಳಿದ್ದೇವೆ. ನಮಗೆ ಕೇಂದ್ರ ಸರ್ಕಾರದಿಂದ ಸಲಹೆ, ಸೂಚನೆ ಬಂದಿದೆ. ನಾಗರೀಕ ಸುರಕ್ಷತಾ ಕ್ರಮ ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಸೂಚನೆ ಬಂದಿದೆ ಎಂದರು. ಈ ಹಿನ್ನೆಲೆಯಲ್ಲಿ ರಾಜ್ಯದ ಡ್ಯಾಮ್ ಗಳು ಹಾಗೂ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ಮಾಡ್ತಿದ್ದೇವೆ. ಎಲ್ಲೆಲ್ಲಿ ಭದ್ರತೆ ಬೇಕು ಅದನ್ನು ನೀಡುತ್ತೇವೆ. ಕೇಂದ್ರದ ಗುಪ್ತಚರ ಇಲಾಖೆಯ ಜೊತೆಗೆ ಸಂಪರ್ಕ ಇಟ್ಟುಕೊಂಡಿದ್ದೇವೆ ಎಂದರು‌.

ರಾಜ್ಯದಲ್ಲಿ ಪಾಕಿಸ್ತಾನದ ಪ್ರಜೆಗಳು ಯಾರು ಇದ್ದರೋ ಅವರನ್ನು ವಾಪಸ್ ಕಳಿಸಲಾಗಿದೆ. ಎಲ್ಲರ ಮಾಹಿತಿ ಕೇಂದ್ರಕ್ಕೆ ನೀಡಿದ್ದೇವೆ ಎಂದ ಅವರು, ಸಿಎಂ ಸಿದ್ದರಾಮಯ್ಯ ರಾಯಚೂರು ಪ್ರವಾಸ ರದ್ದು ವಿಚಾರವಾಗಿ ಮಾತನಾಡಿ, ಸಿಎಂ ಅವರು ಪ್ರವಾಸ ರದ್ದು ಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಈ ಸಂದರ್ಭದಲ್ಲಿ ಅದು ಆಗಬಾರದು. ದೇಶದ ಐಕ್ಯತೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು ಎಂದರು. ಏರ್ ಸ್ಟ್ರೈಕ್ ಕುರಿತಾಗಿ ಕಾಂಗ್ರೆಸ್ ಟ್ವೀಟ್ ವಿಚಾರವಾಗಿ ಇದೇ ಸಂದರ್ಭದಲ್ಲಿ ಮಾತನಾಡಿ, ‌ಅದು ನನಗೆ ಗೊತ್ತಿಲ್ಲ, ಯಾರು ಹಾಕಿದ್ದಾರೆ ಗೊತ್ತಿಲ್ಲ ಎಂದು ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.