ಸದನದಲ್ಲಿ ಪರಶುರಾಮ ಮೂರ್ತಿ ಅಕ್ರಮ ಕೇಸ್ ಸದ್ದು!
– ಕಾರ್ಕಳದಲ್ಲಿ ಪರಶುರಾಮ ವಿಗ್ರಹ ದೋಷ ಪೂರಿತ ವಿವಾದ
– ಸದನದಲ್ಲಿ ಭಾರೀ ಚರ್ಚೆ: ಏನಿದು ವಿವಾದ..?!
NAMMUR EXPRESS NEWS
ಬೆಂಗಳೂರು: ಕಾರ್ಕಳದಲ್ಲಿ ಪರಶುರಾಮ ವಿಗ್ರಹ ದೋಷ ಪೂರಿತವಾಗಿರುವ ಬಗ್ಗೆ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಪ್ರಸ್ತಾಪ ಮಾಡಿದರು. ಅಲ್ಲದೆ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಹಿಂದಿನ ಸರ್ಕಾರದಲ್ಲಾದ ಎಡವಟ್ಟನ್ನು ಸರ್ಕಾರ ಬಯಲು ಮಾಡಿದೆ ಎಂದರು. ಪ್ರತಿಮೆ ನಿರ್ಮಾಣದಲ್ಲಿನ ಅಕ್ರಮದ ಬಗ್ಗೆ ಆ ಊರಿನ ಯುವಕರು ದೂರು ನೀಡಿದ್ದರು. ಪ್ರತಿಮೆ ಅರ್ಧ ಭಾಗ ಕಂಚು, ಇನ್ನರ್ಧ ಭಾಗ ಫೈಬರ್ನದ್ದಾಗಿತ್ತು.
ಪರಶುರಾಮನ ಮೇಲೆ ಆ ಊರಿನ ಭಾಗದ ಜನರಿಗೆ ನಂಬಿಕೆ ಇದೆ. ಆದರೆ ದೇವರ ಹೆಸರು ಹೇಳಿ ಹಣ ಕಬಳಿಸುವ ಕೆಲಸ ಆಗಿದೆ ಎಂದು ಆರೋಪಿಸಿದರು ಈ ವೇಳೆ ಬಿಜೆಪಿ ಸದಸ್ಯರು ತನಿಖೆ ಮಾಡಿ, ಪೇಪರ್ ನಲ್ಲಿರೋದನ್ನ ಹೇಳಬೇಡಿ ಎಂದರು. ಇದು ನಮ್ಮ ಸರ್ಕಾರದಲ್ಲಿ ಆಗಿದ್ದಲ್ಲ, ಹಿಂದಿನ ಸರ್ಕಾರದಲ್ಲಿ ಆಗಿದ್ದು. ನ್ಯಾ.ನಾಗಮೋಹನ ದಾಸ್ ಸಮಿತಿ ಸ್ಥಳಕ್ಕೆ ಭೇಟಿ ನೀಡಿತ್ತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿಗೆ ದೂರು ನೀಡಿದ್ದರು ಎಂದು ತಂಗಡಗಿ ಹೇಳಿದಾಗ ಪ್ರಕರಣದ ಬಗ್ಗೆ ತನಿಖೆ ಮಾಡಿ ಎಂದು ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಹೇಳಿದರು. ಹೀಗೆ ವಾಕ್ ಸಮರದ ಮೂಲಕ ಸದಸ್ಯರು ಆಕ್ರೋಶ ಹೊರಹಾಕಿದರು.