ಮದ್ಯೆ ಪ್ರಿಯರಿಗೆ ಬೆಲೆ ಏರಿಕೆ ಶಾಕ್…!
– ಹೊಸ ವರ್ಷಕ್ಕೆ ಮದ್ಯ ಪ್ರಿಯರಿಗೆ ಕಹಿ ಸುದ್ದಿ
– ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ: ಎಷ್ಟೆಷ್ಟು?
NAMMUR EXPRESS NEWS
ಬೆಂಗಳೂರು: ಹೊಸ ವರ್ಷದ ಸಮೀಪಿಸುತಿದ್ದಂತೆ ಮದ್ಯಪ್ರಿಯರಿಗೆ ಶಾಕ್ ಎದುರಾಗಿದೆ. ಜನವರಿಯಿಂದ ಮದ್ಯದ ಬೆಲೆ ಭಾರೀ ಏರಿಕೆಯಾಗಲಿದೆ. ವರ್ಷದ ಆರಂಭದಲ್ಲೇ ಸರ್ಕಾರ ಆರ್ಥಿಕ ಮೂಲವಾದ ಅಬಕಾರಿ ಸುಂಕದ ದರವನ್ನು ಶೇ.20ರಷ್ಟು ಹೆಚ್ಚಳ ಮಾಡಿತ್ತು. ಈಗ ಹೊಸ ವರ್ಷದ ಪಾರ್ಟಿ ಜೋಷ್ ಅಲ್ಲಿದ್ದವರಿಗೆ ಮತ್ತೆ ಮದ್ಯದ ಕಂಪನಿಗಳು ಶಾಕ್ ನೀಡಿವೆ. ಜನವರಿ 1ರಿಂದ ಮದ್ಯ ದರ ಏರಿಕೆಗೆ ಸೂಚನೆ ನೀಡಲಾಗಿದೆ. ರಾಜ್ಯದ ಕೆಳ ವರ್ಗದ ಜನ ಅತೀ ಹೆಚ್ಚು ಸೇವಿಸುವ ಮದ್ಯದ ದರ ಏರಿಕೆಗೆ ಚಿಂತನೆ ನಡೆದಿದೆ. ಜನವರಿ 1ರಿಂದ ದರ ಏರಿಕೆ ಮಾಡುವಂತೆ ಬಾರ್ ಮಾಲೀಕರಿಗೆ ಕಂಪನಿಗಳಿಂದ ಸೂಚನೆ ನೀಡಿದೆ. ಕಂಪನಿಗಳ ಉತ್ಪಾದನಾ ವೆಚ್ಚ, ಸರಕು ಸಾಗಣೆ ವೆಚ್ಚಗಳು ಹೆಚ್ಚಾಗಿರುವ ಕಾರಣ ದರ ಏರಿಕೆ ಅಗತ್ಯವಾಗಿದ್ದು, ಈ ಕಾರಣ ಗ್ರಾಹಕರ ಮೇಲೆ ಹೊರೆ ಹಾಕಲೇಬೇಕಾದ ಹಿನ್ನೆಲೆ ದರ ಏರಿಕೆಗೆ ಕಂಪನಿಗಳು ನಿರ್ಧಾರ ಮಾಡಿವೆ.