ಪುನೀತ್ ಪತ್ನಿ ಅಶ್ವಿನಿ ಬಗ್ಗೆ ಕೆಟ್ಟ ಪೋಸ್ಟ್: ಅಭಿಮಾನಿಗಳ ಕಿಚ್ಚು!
* ಅಶ್ವಿನಿ ಪುನೀತ್ ರಾಜ್ಕುಮಾರ್ ನಕಲಿ ಫೋಟೋ ಬಳಕೆ
* ಮದುವೆ ಯಾಗ್ತೇನೆ ಎಂದು ಪೋಸ್ಟ್ ಹಾಕಿದ ಅವಿವೇಕಿ
NAMMUR EXPRESS NEWS
ಬೆಂಗಳೂರು: ಕರ್ನಾಟಕ ರತ್ನ, ಪವರ್ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಅವರ ಡೀಪ್ಫೇಕ್ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಕಿಡಿಗೇಡಿಯೋರ್ವ ಅತಿರೇಕ ಪ್ರದರ್ಶಿಸಿದ್ದಾನೆ.
ಯೋಗೇಂದ್ರ ಪ್ರಸಾದ್ ಎಂಬ ಟ್ವಿಟರ್ ಖಾತೆಯಲ್ಲಿ ಡೀಪ್ ಫೇಕ್ ವಿಡಿಯೋ ಹಂಚಿಕೊಳ್ಳಲಾಗಿದ್ದು, ಅಶ್ವಿನಿ ಪುನೀತ್ ರಾಜ್ಕುಮಾರ್ಗೆ ಬಾಳು ಕೊಡಲು ನಿರ್ಧರಿಸಿದ್ದೇನೆ.ಆ. 29 2024 ರಂದು ನಾನು ವಿವಾಹ ವಾಗಲಿದ್ದೇನೆ ದಯವಿಟ್ಟು ಅಪ್ಪು ಬಾಸ್ ಅಭಿಮಾನಿಗಳು, ರಾಜವಂಶದ ಅಭಿಮಾನಿಗಳು ಎಲ್ಲರೂ ಬಂದು ಆಶೀರ್ವಾದ ಮಾಡಬೇಕು ಎಂದು ನಮ್ಮ ಸವಿನಯ ಆಮಂತ್ರಣ. ಸ್ಥಳ : ಶ್ರೀ ಕಂಠೀರವನಗರ ಸ್ಟುಡಿಯೋಸ್, ನಾರ್ತ್ ವೆಸ್ಟ್ ಬೆಂಗಳೂರು ಎಂದು ಬರೆಯಲಾಗಿದೆ.
್ವಿಟರ್ನ್ಲಿ ಕೇವಲ 100 ಫಾಲೋವರ್ಸ್ ಅನ್ನು ಹೊಂದಿರುವ ಯೋಗೇಂದ್ರ ಎಂಬ ಹೆಸರಿನ ಈ ವ್ಯಕ್ತಿಯೂ ರಾಜವಂಶದ ಅಭಿಮಾನಿ ಮತ್ತು ಚಿತ್ರನಟ ಹಾಗೂ ರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಳ ಬಿನ್ನಿಪೇಟೆ ಅಧ್ಯಕ್ಷ ಎಂದು ತನ್ನ ಬಯೋನಲ್ಲಿ ಹಾಕಿಕೊಂಡಿದ್ದಾನೆ. ತನ್ನ ಟ್ವಿಟರ್ ಪೋಸ್ಟ್ಗಳಲ್ಲಿ ಪ್ರತಿಯೊಬ್ಬರ ಕಾಲೆಳೆಯುವ ವಿಚಾರಗಳನ್ನು ಹಾಕಿಕೊಂಡಿದ್ದು, ಈತ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಡೀಪ್ಫೇಕ್ ವಿಡಿಯೋ ನೋಡಿ ಕಿಡಿಕಾರಿರುವ ನೆಟ್ಟಿಗರು ಕಠಿಣ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರು ನಗರ ಪೊಲೀಸರನ್ನು ಟ್ಯಾಗ್ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕಿಡಿಗೇಡಿಯೋರ್ವ ಈ ರೀತಿಯ ಡೀಪ್ಫೇಕ್ ವಿಡಿಯೋ ಹರಿಬಿಟ್ಟಿದ್ದು, ಈ ವಿಡಿಯೋ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರನ್ನು ತಲುಪುವ ಮುನ್ನವೇ ಕ್ರಮ ತೆಗೆದುಕೊಳ್ಳಬೇಕು ಎಂದು ಅನೇಕರು ಬೆಂಗಳೂರು ಪೊಲೀಸ್, ಸೈಬರ್ ಕ್ರೈಂಗೆ ಟ್ಯಾಗ್ ಮಾಡಿ ಆಗ್ರಹಿಸಿದ್ದಾರೆ.