-ಹಣ ವರ್ಗಾವಣೆ ವಿಚಾರದ ಕುರಿತು ವಿವಾದ
-ನಾಳೆ ಬೆಳಗ್ಗೆ (ಜ 8) 11 ಗಂಟೆಗೆ ವಿಚಾರಣೆ
ನಟಿ ರಾಧಿಕಾ ಕುಮಾರಸ್ವಾಮಿ ಅವರು ಹಣ ವರ್ಗಾವಣೆ ವಿಚಾರದ ಕುರಿತು ವಿವಾದ ಸೃಷ್ಟಿ ಮಾಡಿಕೊಂಡಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಮಾಧ್ಯಮಗಳ ಮುಂದೆ ಹಾಜರಾಗಿದ್ದರು. ಈಗ ಅವರಿಗೆ ಸಿಸಿಬಿ ನೋಟಿಸ್ ನೀಡಿದೆ.
ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ನೀಡಿದೆ. ರಾಧಿಕಾ ಕುಮಾರಸ್ವಾಮಿ ಅಕೌಂಟ್ಗೆ 1.25 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ ಎಂಬ ಆರೋಪದಡಿ ಸಿಸಿಬಿ, ರಾಧಿಕಾ ಕುಮಾರಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.
ನಾಳೆ ಬೆಳಗ್ಗೆ (ಜ 8) 11 ಗಂಟೆಗೆ ರಾಧಿಕಾ ಕುಮಾರಸ್ವಾಮಿ ಅವರು ಸಿಸಿಬಿ ವಿಚಾರಣೆಯಲ್ಲಿ ಪಾಲ್ಗೊಳ್ಳಬೇಕು. ಗಣ್ಯರು, ಉದ್ಯಮಿಗಳಿಂದ ಕೋಟ್ಯಂತರ ಹಣವನ್ನು ವಂಚಿಸಿರುವ ಆರೋಪದಲ್ಲಿ ಯುವರಾಜ್ ಎಂಬಾತನನ್ನು ಸಿಸಿಬಿ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಇದಾದ ನಂತರದಲ್ಲಿ ಈ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹೆಸರು ಕೇಳಿಬಂದಿದೆ. ಯುವರಾಜ್ ಅವರು ರಾಧಿಕಾ ಮತ್ತು ಅವರ ಸಹೋದರನ ಬ್ಯಾಂಕ್ ಖಾತೆಗೆ 1.25 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.