Categories
ಬೆಂಗಳೂರು

ಗಣೇಶ ಹಬ್ಬಕ್ಕೆ ಗಾಳಿ ಸಹಿತ ಮಳೆಯ ಕಾಟ?!

ಗಣೇಶ ಹಬ್ಬಕ್ಕೆ ಗಾಳಿ ಸಹಿತ ಮಳೆಯ ಕಾಟ?!
* ಗಾಳಿಯೊಂದಿಗೆ ಮಳೆ ಅಬ್ಬರ ಸಾಧ್ಯತೆ
* ಸೆ.8ರಿಂದ ಭಾರಿ ಮಳೆ ಎಚ್ಚರಿಕೆ!

NAMMUR EXPRESS NEWS
ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ ಸಕ್ರಿಯಗೊಂಡಿದೆ. ಸೆ. 07ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

* ಗಾಳಿಯೊಂದಿಗೆ ಮಳೆ ಅಬ್ಬರ!!

ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಒಳನಾಡಿನ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ!!

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಧಾರಣ ಮಳೆಯಾಗುವ ಸಾಧ್ಯತೆ ದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿ.ಸೆ ಮತ್ತು 20 ಡಿ.ಸೆ ಇರಲಿದೆ.

* ಸೆ.8ರಿಂದ ಭಾರಿ ಮಳೆ ಎಚ್ಚರಿಕೆ!!

ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಹಾಗೂ ಗಾಳಿ ಬೀಸಲಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.