- ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ
- ರಾಜಧಾನಿ ದಾಖಲೆ ಮಳೆ: 1890ರ ಬಳಿಕ ಹೆಚ್ಚು ಮಳೆ
- ರಾಮನಗರ, ಕೋಲಾರ ಸೇರಿ ಹಲವೆಡೆ ಭಾರೀ ಹಾನಿ
- ಆಶ್ರಯ ಕೇಂದ್ರದಲ್ಲಿ ಜನರಿಗೆ ಆಶ್ರಯ: ಸಾವಿರಾರು ಕೋಟಿ ಬೆಳೆ ನಾಶ
NAMMUR EXPRESS NEWS
ಬೆಂಗಳೂರು: ಕರ್ನಾಟಕದಾದ್ಯಂತ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಈಗಾಗಲೇ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ರಾಜ್ಯದ ಹಲವೆಡೆಭಾರೀ ಹಾನಿ ಸೃಷ್ಟಿ ಮಾಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕೂಡ ಪ್ರವಾಹದ ಆತಂಕ ಇದೆ. ರಾಜಧಾನಿ ದಾಖಲೆ ಮಳೆಯಾಗಿದ್ದು 1890ರ ಬಳಿಕ ಹೆಚ್ಚು ಮಳೆಯಾಗಿದೆ.
ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ಹಲವು ಭಾಗಗಳಲ್ಲಿ ಸೆ.2ರವರೆಗೂ ಮಳೆ ಸುರಿಯುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲೂ ಈ ವಾರಪೂರ್ತಿ ಸಂಜೆಯ ಬಳಿಕ ಮಳೆ ಆರ್ಭಟಿಸುವ ಸಾಧ್ಯತೆಯಿದೆ.
ಇನ್ನೆರಡು ದಿನಗಳ ಕಾಲ ಕರ್ನಾಟಕದಲ್ಲಿ ನಿರಂತರ ಮಳೆಯಾಗಲಿದ್ದು, ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಗುರುವಾರ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುರುವಾರ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಇನ್ನೆರಡು ದಿನ ಜೋರಾಗಿ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಿಗೆ ಸೆ. 2ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.